26.5 C
ಪುತ್ತೂರು, ಬೆಳ್ತಂಗಡಿ
September 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಗುರಿಪಳ್ಳ ನಿವಾಸಿ ಶ್ರೀಧರ ನಾಯ್ಕ ಎಂಬವರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಗಲು ಹೊತ್ತು ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಜೂ. 20ರಂದು ನಡೆದಿದೆ.

ಮನೆಯಲ್ಲಿ ಒಟ್ಟು ನಾಲ್ಕು ಮಂದಿ ಇದ್ದು ಶ್ರೀಧರ ಅವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರು.ಇತರರು ಕೆಲಸಕ್ಕೆಂದು ಮನೆಯಿಂದ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕಳ್ಳರು ಹಂಚು ತೆಗೆದು ಒಳನುಗ್ಗಿದ್ದು ಮನೆಯಲ್ಲಿ ಇದ್ದ ಕಪಾಟಿನ ಬೀಗ ಮುರಿದು ಸುಮಾರು 10 ಲಕ್ಷ ರೂ.ಗಿಂತ ಅಧಿಕ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿರುವುದಾಗಿ ತಿಳಿದು ಬಂದಿದೆ.

ಚಾವಣಿಯ ಹಂಚು ತೆಗೆದು ಒಳ ನುಗ್ಗಿದ ಕಳ್ಳರು ಬಳಿಕ ಹಂಚನ್ನು ಹಾಗೆ ಇಟ್ಟು ಹಿಂಭಾಗಲಿನ ಮೂಲಕ ಪರಾರಿಯಾಗಿದ್ದಾರೆ. ಶ್ರೀಧರ ಅವರ ಮನೆ ಉಜಿರೆ-ಗುರಿಪಳ್ಳ ರಸ್ತೆಯ ಬದಿಯಲ್ಲೇ ಇದ್ದು ಇಲ್ಲಿ ಜನ- ವಾಹನ ಓಡಾಟವಿದ್ದರೂ ಹಾಡುಹಗಲೇ ಕಳ್ಳತನ ನಡೆದಿದೆ.ಸ್ಥಳಕ್ಕೆ ಬೆಳ್ತಂಗಡಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Related posts

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಜು. 27, 28: ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya
error: Content is protected !!