26.5 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಜೂ. 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7.30ರಿಂದ ಸುಮಾರು ಅರ್ಧ ಗಂಟೆಗಳ ಕಾಲ ವಿದ್ಯಾರ್ಥಿಗಳು ಧ್ಯಾನ ಹಾಗೂ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ಡಾ. ವೃಂದಾ ಬೆಡೇಕರ್ ಅವರ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಯೋಗದ ಮಹತ್ವ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅದರ ಸಕಾರಾತ್ಮಕ ಪರಿಣಾಮಗಳು ಹಾಗೂ ದಿನನಿತ್ಯದ ಜೀವನದಲ್ಲಿ ಯೋಗಾಭ್ಯಾಸದ ಅಗತ್ಯತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ನಿಯಮಿತ ಯೋಗಾಭ್ಯಾಸವು ಏಕಾಗ್ರತೆಯನ್ನು ವೃದ್ಧಿಸುವುದರ ಜೊತೆಗೆ ಒತ್ತಡ ನಿವಾರಣೆ, ದೈಹಿಕ ಕ್ಷಮತೆ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಟ್ರಸ್ಟಿಗಳಾದ ಡಾ. ಎಸ್. ಎನ್. ವೆಂಕಟೇಶ್ ನಾಯಕ್, ಸುಭಾಷ್ ಝಾ, ಡಾ. ಶರತ್ ಗೋರೆ, ಮೆಹಬೂಬ್ ಬಾಷಾ, ಚಂದ್ರಶೇಖರ್ ರಾಜೇ ಅರಸ್ ಹಾಗೂ ಯೋಗೇಶ್ ಬೆಡೆಕರ್ ಉಪಸ್ಥಿತರಿದ್ದರು.

Related posts

ಸಹನಾ ಶ್ರೀ ಫೌಂಡೇಶನ್ ವತಿಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!