September 24, 2026
ಆರೋಗ್ಯಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ರೋವರ್ಸ್ ರೆಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪದ್ಮನಾಭ ಕೆ ಇವರು ಇಂದಿನ ಆಧುನಿಕ ಜೀವನ ಜಗತ್ತಿನಲ್ಲಿ ಯೋಗ ಅತ್ಯವಶ್ಯಕವಾಗಿದೆ. ಇದು ಮನುಷ್ಯನ ದೈಹಿಕ ಆರೋಗ್ಯಕ್ಕೆ ಅಷ್ಟೇ ಅಲ್ಲದೆ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಕಾರಿ ಹಾಗಾಗಿ ವಿದ್ಯಾರ್ಥಿಗಳು ತಮ್ಮ ಜೀವನದ ದಿನದ ಅರ್ಧ ಗಂಟೆ ಯೋಗಾಸನಕ್ಕಾಗಿ ಮೀಸಲಿಡಬೇಕು ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಎನ್., ಯೋಗಾಸನ ಮತ್ತು ಪ್ರಾಣಯಾಮಗಳ ಪ್ರಾತ್ಯಕ್ಷಿ ಕತೆ ಮತ್ತು ಅದರ ವಿವರಣೆಗಳು ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ನಿರ್ವಹಣೆ ಮಾಡಿದ ಅಂತಿಮ ಎಂಕಾಂ ವಿದ್ಯಾರ್ಥಿ ಶಮೀರ್ ಇವರು ಯೋಗ ದಿನಾಚರಣೆಯ ಆಚರಣೆ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ರೇಂಜರ್ ಲೀಡರ್ ಡಾ. ರಾಜೇಶ್ವರಿ ಎಚ್ಎಸ್ ಹಾಗೂ ಉಪನ್ಯಾಸಕರಾದ ಡಾ. ಶೀಲಾವತಿ ಮತ್ತು ಸುನಿತಾ ಇವರು ಉಪಸ್ಥಿತರಿದ್ದರು

Related posts

ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ಆಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!