September 24, 2026
ಆರೋಗ್ಯಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬ್ರೈಟ್ ಹೊರೈಝನ್‌ನಲ್ಲಿ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

ವೇಣೂರು: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕರಿಮಣೇಲಿನ ಬ್ರೈಟ್ ಹೊರೈಝನ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕ ವೀಕ್ಷಿತ್ ವಿ. ಕುಮಾರ್ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮದ ಅಭ್ಯಾಸವನ್ನು ನಡೆಸಿಕೊಟ್ಟರು. ಯೋಗದ ಮಹತ್ವ, ಆರೋಗ್ಯಕರ ಜೀವನಶೈಲಿಯಲ್ಲಿ ಅದರ ಪಾತ್ರ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಯೋಗದ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಉತ್ಸಾಹದಿಂದ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಶರತ್ ಗೋರೆ, ಕಾರ್ಯದರ್ಶಿ ಶಾಂಭವಿ ಬಿ. ಎನ್. ಶಾಲೆಯ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಉಜಿರೆ ಶ್ರೀ ಧ.ಮ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಭಿವ್ಯಕ್ತಿ ಧಾರೆ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!