September 25, 2026
ಆರೋಗ್ಯಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾ ಸಂಘದ ವತಿಯಿಂದ ಹತ್ತು ದಿನಗಳ ಯೋಗ ಶಿಬಿರಕ್ಕೆ ಚಾಲನೆ ನೀಡಿದ್ದು,
ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಯೋಗ ವಿಭಾಗದ ಸಹಾಯಕಿಯರಾದ ವೀಕ್ಷಣಾ ಹಾಗೂ ವರ್ಷಿಣಿ ಎಂ. ಅವರು ಯೋಗದ ಮಹತ್ವ ಮತ್ತು ಅದರ ಆರೋಗ್ಯಕರ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್. ವಹಿಸಿದ್ದರು. ಈ ಸಂದರ್ಭದಲ್ಲಿ ಯೋಗ ತರಬೇತುದಾರರಾಗಿರುವ ಉಜಿರೆ ಬಿ.ಎನ್.ವೈ.ಎಸ್. ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯರಾದ ವೀಕ್ಷಣಾ ಹಾಗೂ ವರ್ಷಿಣಿ ಎಂ. ಅವರು ಮಕ್ಕಳಿಗೆ ಯೋಗಾಭ್ಯಾಸದ ಅಗತ್ಯತೆ, ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಯೋಗದ ಪಾತ್ರ ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಎನ್. ಅವರು ಶಿಬಿರವನ್ನು ಆಯೋಜಿಸಿದ್ದರು. ಹತ್ತು ದಿನಗಳ ಈ ಯೋಗ ಶಿಬಿರದಲ್ಲಿ ಸುಮಾರು 150 ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದಾರೆ.
ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೇಯಾಂಸ ಜೈನ್ ಅವರು ನಿರೂಪಿಸಿದರು. ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು.

Related posts

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!