26.5 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿಬೆಳ್ತಂಗಡಿ

“ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಕಾರ್ಯಕ್ರಮದಡಿಯಲ್ಲಿ ಕೊಡೆಗಳ ವಿತರಣೆ

ಬೆಳ್ತಂಗಡಿ: ಮಳೆಗಾಲದಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ವಾರ್ಡ್ ನಂ.107ರ ಮಂಜುನಾಥ್ ರೆಂಕೆದಗುತ್ತು ಅವರ ನೇತೃತ್ವದಲ್ಲಿ “ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಎಂಬ ವಿಶೇಷ ಸೇವಾ ಕಾರ್ಯಕ್ರಮದಡಿ ಮನೆಮನೆಗೆ ಕೊಡೆಗಳ ವಿತರಣೆಯು ಜೂ.21 ರಂದು ನಡೆಯಿತು.

ಮಳೆಗಾಲದಲ್ಲಿ ಶಾಲಾ ಮಕ್ಕಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಳೆಗೆ ನೆನೆದು ಆರೋಗ್ಯ ಸಮಸ್ಯೆಗಳಿಗೆ ಒಳಗಾಗದಂತೆ ಹಾಗೂ ಪ್ರತಿಯೊಂದು ಕುಟುಂಬಕ್ಕೂ ಉಪಯೋಗವಾಗುವ ಒಂದು ಸಣ್ಣ ಸಹಾಯವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ರೆಂಕೆದಗುತ್ತು ತಿಳಿಸಿದ್ದಾರೆ.

ವಾರ್ಡ್‌ನ ಪ್ರತಿಯೊಂದು ಕುಟುಂಬದೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸುವ ಹಾಗೂ ಸಮಾಜದ ಮೇಲಿನ ಕಾಳಜಿಯ ಸಂಕೇತವಾಗಿ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಸ್ಥಳೀಯ ನಿವಾಸಿಗಳು ಈ ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್‌ ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷ ದೀಪಕ್ ಜಿ., ಕಿರಣ್, ಸಂತೋಷ್, ಸಂದೀಪ್, ಸುದೀಪ್, ಕುಮಾರಸ್ವಾಮಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಮಳೆಗಾಲದ ಸಂದರ್ಭದಲ್ಲಿ ಜನೋಪಯೋಗಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಲೋಕಸಭೆಯಲ್ಲಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ: ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ

Suddi Udaya
error: Content is protected !!