September 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

ಉಜಿರೆ: ಗ್ರಾಮೀಣ ಸಮುದಾಯಗಳಿಗೆ ಆರ್ಥಿಕ ಸಾಕ್ಷರತೆ ಹಾಗೂ ಬ್ಯಾಂಕಿಂಗ್ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳು (FLC-CRP) ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ (NRLM) ವಿಭಾಗದ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹರಿಪ್ರಸಾದ್ ಅವರು ಹೇಳಿದರು.ಅವರು ರುಡ್‌ಸೆಟ್ ಸಂಸ್ಥೆ ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾದ ಹಣಕಾಸು ಸಾಕ್ಷರತಾ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (FLC-CRP) ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ತರಬೇತಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಸುನೀಲ್ ನಾಯಕ್ ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ ವಿಭಾಗದ ಜಿಲ್ಲಾ ವ್ಯವಸ್ಥಾಪಕ ಶಕುಂತಲಾ ತರಬೇತಿದಾರರೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಕೆಲವು ಶಿಬಿರಾರ್ಥಿಗಳು ತಮ್ಮ ಕಲಿಕೆಯ ಅನುಭವಗಳನ್ನು ಹಂಚಿಕೊಂಡು, ಗುಣಮಟ್ಟದ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ರುಡ್‌ಸೆಟ್ ಸಂಸ್ಥೆ ಹಾಗೂ ಎನ್‌ಆರ್‌ಎಲ್‌ಎಂ ಇಲಾಖೆಗೆ ಕೃತಜ್ಞತೆ ಸಲ್ಲಿಸಿದರು.

ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕರುಣಾಕರ್ ಕೆ. ಜೈನ್ ಅವರು ಕಾರ್ಯಕ್ರಮ ನಿರೂಪಿಸಿ,ಸಿದರು. ಸುಳ್ಯ ತಾಲೂಕು ಪಂಚಾಯತ್‌ನ ಎನ್‌ಆರ್‌ಎಲ್‌ಎಂ ತಾಲೂಕು ಯೋಜನಾ ವ್ಯವಸ್ಥಾಪಕರಾದ ಶ್ರೀಮತಿ ಶ್ವೇತಾ ಧನ್ಯವಾದ ಸಮರ್ಪಿಸಿದರು.

Related posts

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ವಾಣಿಯಲ್ಲಿ ‘ಆರ್ಮ್ಡ್ ಫೋರ್ಸ್‌ನಲ್ಲಿ ವೃತ್ತಿ’ ಕುರಿತು ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya
error: Content is protected !!