November 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ ಹಾಗೂ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಉಜಿರೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ದೀಪಿಕಾ ಶೆಟ್ಟಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ದೀಪಿಕಾ ಶೆಟ್ಟಿ ಅವರು ಯೋಗದ ಮಹತ್ವ, ಅದರ ವೈಜ್ಞಾನಿಕ ಹಿನ್ನೆಲೆ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಯೋಗವು ಬೀರುವ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿವರವಾಗಿ ತಿಳಿಸಿದರು.

ಬಳಿಕ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಆಥಿರೈ ಸಿ., ಕಮಲಿ ಜಿ. ಹಾಗೂ ಲೋಚನ ಆರ್. ಅವರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನಡೆಯಿತು. ಈ ಯೋಗ ಪ್ರದರ್ಶನವು ಎಲ್ಲರ ಗಮನ ಸೆಳೆಯುವಂತಿತ್ತು.

ಕಾರ್ಯಕ್ರಮವನ್ನು ಶಿಕ್ಷಣ ಸಂಸ್ಥೆಯ ಸಹ ಶಿಕ್ಷಕಿ ವಿನಯಲತಾ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ದ.ಕ. ಜಿಲ್ಲಾ ಪ.ಪೂ.ಕಾಲೇಜುಗಳ ಸಂಘ ಮತ್ತು ಎಸ್ ಡಿ ಎಂ ಪ.ಪೂರ.ಕಾಲೇಜಿನ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ: ಎಸ್ ಎಲ್ ಭೋಜೇಗೌಡ

Suddi Udaya

ನಾವೂರು ಸ.ಹಿ. ಪ್ರಾ. ಹಾಗೂ ಪ್ರೌಢಶಾಲೆಯಲ್ಲಿ “ಗುರುವಂದನಾ ಮತ್ತು ಸ್ನೇಹ ಸಮ್ಮಿಲನ” ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!