29.4 C
ಪುತ್ತೂರು, ಬೆಳ್ತಂಗಡಿ
September 21, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಗುರುವಾಯನಕರೆ: ಯೋಗಾಭ್ಯಾಸ ನಮ್ಮ ಶಾರೀರಿಕ ಹಾಗೂ ಮಾನಸಿಕ ಆರೋಗ್ಯದ ಬಲವರ್ಧನೆಗೆ ಅತ್ಯಗತ್ಯ ಎಂದು ಖ್ಯಾತ ಯೋಗಗುರು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ರ್ಡ್ ನಲ್ಲಿ ದಾಖಲಾದ ಆವಿಷ್ಕಾರ ಯೋಗ ಸಂಸ್ಥೆಯ ಸಂಸ್ಥಾಪಕರಾದ ಕುಶಾಲಪ್ಪ ಗೌಡ ಅವರು ಹೇಳಿದರು.

ಆಧುನಿಕ ದಿನಗಳ ಒತ್ತಡದಿಂದ ಹೊರಗೆ ಬರಲು ಯೋಗ ಪರಮ ಪ್ರಯೋಜನಕಾರಿ ಎಂದು ಅವರು ಹೇಳಿದರು.

ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಮಾತನಾಡಿ, ಭಾರತ ಜಗತ್ತಿಗೆ ಕೊಟ್ಟ ಹಲವು ಮಹತ್ತ್ವದ ಕೊಡುಗೆಗಳಲ್ಲಿ ಯೋಗವೂ ಒಂದು. ಇಂದಿನ ತಲೆಮಾರು ಅದರ ಸದುಪಯೋಗ ಪಡೆದುಕೊಳ್ಳ ಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಟೆಕ್ನೋ ಸ್ಕೂಲ್ ನ ಪ್ರಾಂಶುಪಾಲರಾದ ಸುಮಿತ್ರ ಅವರು ಮಾತನಾಡಿ, ಏಕಾಗ್ರತೆಗೆ ಯೋಗ ಸಹಕಾರಿ. ವಿದ್ಯಾರ್ಥಿಗಳು ಪ್ರತಿನಿತ್ಯ ಯೋಗಾಭ್ಯಾಸ ಮಾಡ ಬೇಕೆಂದರು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದ ಬಳಿಕ ವಿನೂತನವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಲಾಯಿತು.

ಯೋಗಗುರು ಕುಶಾಲಪ್ಪ ಗೌಡ ಅವರು ವಿದ್ಯಾರ್ಥಿಗಳಿಗೆ ಪ್ರಮುಖ ಆಸನಗಳನ್ನು ಮಾಡಿಸುವುದರ ಮೂಲಕ ಯೋಗ ದಿನಾಚರಣೆಗೆ ಹೊಸ ಮೆರುಗನ್ನು ನೀಡಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಸುಂದರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಧ್ಯಾನ ಹಾಗೂ ಸೂರ್ಯ ನಮಸ್ಕಾರವನ್ನು ಮಾಡಲಾಯಿತು.

ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿದ್ದರು. 8ನೇ ತರಗತಿಯ ವಿದ್ಯಾರ್ಥಿನಿ ಕು.ಶಝ್ಮ ಕಾರ್ಯಕ್ರಮವನ್ನು ನಿರೂಪಿಸಿದರು. ಏಳನೇ ತರಗತಿಯ ವಿದ್ಯಾರ್ಥಿನಿ ಕು. ಫಿದಾ ಫಾತಿಮಾ ಸ್ವಾಗತಿಸಿದರು. 6ನೇ ತರಗತಿಯ ಕು.ದೈಶೀ ಧನ್ಯವಾದ ಸಮರ್ಪಿಸಿದರು.

Related posts

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!