September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಕಣಿಯೂರು : ಪ್ರಧಾನಿ ನರೇಂದ್ರ ಮೋದಿಜೀ ಅವರ ಇಚ್ಛಾಶಕ್ತಿಯ ಫಲವಾಗಿ ಯೋಗ ವಿಶ್ವವ್ಯಾಪಿಯಾಗಿದೆ. ಜಗತ್ತನ್ನು ಯೋಗ ಆವರಿಸಿದೆ ಎಂದರೂ ಅತಿಶಯವಿಲ್ಲ. ಯೋಗ ಕೇವಲ ದೈಹಿಕ ಶಕ್ತಿಗಷ್ಟೇ ಅಲ್ಲ, ಮಾನಸಿಕ ಶಕ್ತಿಗೂ ಅತಿಮುಖ್ಯ. ಹಿಂದೂ ಪರಂಪರೆಯ ಶ್ರೇಷ್ಠತೆಯ ಭಾಗವಾಗಿರುವ ಯೋಗವನ್ನು ನಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳೋಣ. ಅನ್ನುವ ಧ್ಯೇಯ ದೊಂದಿಗೆ ಬಿಜೆಪಿ ಯುವಮೋರ್ಚಾ ಕಣಿಯೂರು ಮಹಾಶಕ್ತಿ ಕೇಂದ್ರದ ವತಿಯಿಂದ ಜೂ 21 ರಂದು
ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ರೈತ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಕಣಿಯೂರು ಗ್ರಾಮ ಮುಗೆರೋಡಿ ಶ್ರೀಮತಿ ಮಂಜುಳಾ ಮತ್ತು ಪುರುಷೋತ್ತಮ ಗೌಡ ಇವರ ಸುಪುತ್ರಿ ಕು.ಅದಿತಿ ಯೋಗಾಸನದಲ್ಲಿ 2024 ರಲ್ಲಿ ಇಂಡಿಯ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿದ ಸಾಧಕಿಗೆ ಸನ್ಮಾನ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ, ಉಪಾಧ್ಯಕ್ಷರಾದ ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ. ಬಂದಾರು, ಯುವ ವಕೀಲರು ಪಕ್ಷದ ಪ್ರಮುಖರಾದ ಯತೀಶ್ ಶೆಟ್ಟಿ ಪಣೆಕ್ಕರ,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರ್, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರು ಯುವ ವಕೀಲರಾದ ಉದಯ್ ಕುಮಾರ್ ಬಿ. ಕೆ. ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷರಾದ ಸೀತಾರಾಮ ಮಡಿವಾಳ,ಪ್ರಮುಖರಾದ ಮಹಾಬಲ ಗೌಡ ಬಂದಾರು,ವಿಠ್ಠಲ್ ಶೆಟ್ಟಿ ಕೊಲ್ಲೊಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya
error: Content is protected !!