27.4 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ : ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉದ್ಘಾಟಿಸಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಗಣಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಹೇಮಲತಾ ಎನ್ ಅವರು ಯೋಗದ ಮಹತ್ವ ಮತ್ತು ಆರೋಗ್ಯದ ಮೇಲೆ ಅದರ ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.

ವಾಣಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಯೋಗ ಚಾಂಪಿಯನ್ ಮೋಹಿತ್ ಗೌಡ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯ ಮತ್ತು ಏಕಾಗ್ರತೆಯನ್ನು ಬೆಳೆಸಿಕೊಳ್ಳಬಹುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ವಿವಿಧ ಯೋಗಾಸನಗಳ ಪ್ರದರ್ಶನ ನಡೆಯಿತು.

ವೇದಿಕೆಯಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಯು., ಸಹ ಕಾರ್ಯಕ್ರಮಾಧಿಕಾರಿ ಶ್ರಾವ್ಯ ಎಸ್. ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಮೌಲ್ಯ ಮತ್ತು ನಿಧಿ ಕಾರ್ಯಕ್ರಮ ನಿರೂಪಿಸಿದರು. ಎನ್‌.ಎಸ್‌.ಎಸ್ ಘಟಕ ನಾಯಕ ಕೈಲಾಶ್ ಸ್ವಾಗತಿಸಿದರು. ಎನ್‌.ಎಸ್‌.ಎಸ್ ಘಟಕ ನಾಯಕಿ ಇಂದುಮತಿ ವಂದಿಸಿದರು.

Related posts

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya
error: Content is protected !!