September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ನೆರಿಯ: ಗಂಡಿಬಾಗಿಲಿನ ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಆಚರಿಸಲಾಯಿತು. 

ಕಾರ್ಯಕ್ರಮವನ್ನು ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಓಮನಾ ಹಾಗೂ ಅತಿಥಿ ಗಣ್ಯರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಯು.ಸಿ. ಪೌಲೋಸ್ ಹಾಗೂ ಟ್ರಸ್ಟಿ ಸದಸ್ಯೆ ಮೇರಿ ಯು.ಪಿ. ಅವರ ನೇತೃತ್ವದಲ್ಲಿ ಆಶ್ರಮದ ನಿವಾಸಿಗಳು, ಸಿಬ್ಬಂದಿ ವರ್ಗದವರು ಹಾಗೂ ಉಪಸ್ಥಿತರಿದ್ದ ಗಣ್ಯರಿಗೆ ವಿವಿಧ ಯೋಗಾಸನಗಳನ್ನು ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

  ಸಂಸ್ಥೆಯ ವೈದ್ಯರಾದ ಡಾ. ಶಿವಾನಂದ ಸ್ವಾಮಿ ಅವರು ಯೋಗದ ಮಹತ್ವದ ಕುರಿತು ಮಾತನಾಡಿ, ಯೋಗವು ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ವೃದ್ಧಿಸುವ ಪ್ರಾಚೀನ ಭಾರತೀಯ ಶಿಸ್ತು ಆಗಿದ್ದು, ಒತ್ತಡವನ್ನು ನಿಯಂತ್ರಿಸಲು, ಮನಸ್ಸಿಗೆ ಶಾಂತಿಯನ್ನು ನೀಡಲು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.

 ಈ ಸಂದರ್ಭದಲ್ಲಿ  ಶಾಜಿ (ವಯನಾಡು), ಜೋಸೆಫ್ ಪಿ.ಪಿ., ದೇವಸ್ಯ ಎಂ.ಪಿ., ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ, ನಾಲ್ಕೂರು ಗ್ರಾಮಸ್ಥರ ಸಮಾಲೋಚನ ಸಭೆ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್ ವತಿಯಿಂದ “ಬೆಳ್ತಂಗಡಿ ನಿನಾದ” ಉದ್ಘಾಟನೆ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!