30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ ಹಾಗೂ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಉಜಿರೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ದೀಪಿಕಾ ಶೆಟ್ಟಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ದೀಪಿಕಾ ಶೆಟ್ಟಿ ಅವರು ಯೋಗದ ಮಹತ್ವ, ಅದರ ವೈಜ್ಞಾನಿಕ ಹಿನ್ನೆಲೆ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಯೋಗವು ಬೀರುವ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿವರವಾಗಿ ತಿಳಿಸಿದರು.

ಬಳಿಕ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಆಥಿರೈ ಸಿ., ಕಮಲಿ ಜಿ. ಹಾಗೂ ಲೋಚನ ಆರ್. ಅವರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನಡೆಯಿತು. ಈ ಯೋಗ ಪ್ರದರ್ಶನವು ಎಲ್ಲರ ಗಮನ ಸೆಳೆಯುವಂತಿತ್ತು.

ಕಾರ್ಯಕ್ರಮವನ್ನು ಶಿಕ್ಷಣ ಸಂಸ್ಥೆಯ ಸಹ ಶಿಕ್ಷಕಿ ವಿನಯಲತಾ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

Suddi Udaya
error: Content is protected !!