September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.20 ರಂದು ಆಚರಿಸಲಾಯಿತು.

ಶ್ರೀ ಧ.ಮಂ.ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಷ್ಟಾಂಗ ಯೋಗದ ಬಗ್ಗೆ ಮಾಹಿತಿ ನೀಡಿ, ಯೋಗ ಜೀವನದ ಅಂಗವಾಗಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಿತು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya
error: Content is protected !!