28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಉಜಿರೆಯ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ತಿರುವರುಲ್ ಸೆಲ್ವನ್ ಹಾಗೂ ಪುಟ್ಲೂರು ಹೇಮಲತ ರೆಡ್ಡಿ ಅವರು ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನೀಡಿ ಯೋಗಾಭ್ಯಾಸ ನಡೆಸಿಕೊಟ್ಟರು. ಅಲ್ಲದೆ, ಯೋಗದ ಮಹತ್ವ, ಆರೋಗ್ಯದ ಮೇಲೆ ಅದರ ಸಕಾರಾತ್ಮಕ ಪರಿಣಾಮಗಳು ಹಾಗೂ ದೈನಂದಿನ ಜೀವನದಲ್ಲಿ ಯೋಗದ ಅಗತ್ಯತೆ ಕುರಿತು ಮಾಹಿತಿ ನೀಡಿದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದ್ದು, ವಿದ್ಯಾರ್ಥಿಗಳು ಪ್ರತಿನಿತ್ಯ ಯೋಗಾಭ್ಯಾಸ ಮಾಡುವಂತೆ ಕರೆ ನೀಡಿದರು.

ಶಿಕ್ಷಕಿ ಸವಿತಾ ವೇದಾಪ್ರಕಾಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

Suddi Udaya
error: Content is protected !!