September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬೆಳ್ತಂಗಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಗೆ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆಯಿಂದ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ

ಬೆಳ್ತಂಗಡಿ: ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಉದ್ದೇಶದಿಂದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯ ಸಿಎಸ್‌ಆರ್ ನಿಧಿಯ ಸಹಯೋಗದಲ್ಲಿ ಯೂತ್ ಫಾರ್ ಸೇವಾ ಸಂಸ್ಥೆಯವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್, ಪೌಚ್ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ಹಸ್ತಾಂತರಿಸಿ ಅವರ ಶೈಕ್ಷಣಿಕ ಬದುಕು ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವ ಇಂತಹ ನೆರವು ಅವರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ ಶಿಕ್ಷಣದತ್ತ ಮತ್ತಷ್ಟು ಪ್ರೋತ್ಸಾಹ ನೀಡುವ ಕಾರ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಜಮೀರ್ ಸಹದಿ, ಎಸ್‌ಎಂಸಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದ ಉಪಸ್ಥಿತರಿದ್ದು ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮಕ್ಕೆ ಸಹಕರಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ಶಾಲೆಯ ವತಿಯಿಂದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಗೆ ಹಾಗೂ ಯೂತ್ ಫಾರ್ ಸೇವಾ ಸಂಸ್ಥೆಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿ ಸ್ಮರಣಾರ್ಥ ಕೃತಜ್ಞತಾ ಪತ್ರವನ್ನು ಸಮರ್ಪಿಸಲಾಯಿತು. ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಕೈಜೋಡಿಸಿರುವ ಸಂಸ್ಥೆಗಳ ಈ ಸಮಾಜಮುಖಿ ಕಾರ್ಯಕ್ಕೆ ಶಾಲಾ ಕುಟುಂಬವು ಅಭಿನಂದನೆ ಸಲ್ಲಿಸಿತು.

Related posts

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಜು.3: ನಾರಾವಿಯಲ್ಲಿ ಗಾಯತ್ರಿ ಮೆಡಿಕಲ್ಸ್ ಶುಭಾರಂಭ ; ಎಲ್ಲ ರೀತಿಯ ಔಷಧಿಗಳು ಒಂದೇ ಸೂರಿನಡಿ ಲಭ್ಯ

Suddi Udaya

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya
error: Content is protected !!