28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್, ಕ್ರೀಡಾ ಸಂಘ ಹಾಗೂ ಇತರ ಸಂಘಗಳ ಉದ್ಘಾಟನೆಯು ಜೂ.20 ರಂದು ನಡೆಯಿತು.

ಉದ್ಘಾಟಕರಾಗಿ ಮಾಜಿ ಸೈನಿಕರು ಹಾಗೂ ನಿವೃತ್ತ ಉಪನ್ಯಾಸಕರಾದ ಹರೀಶ್ ರೈ ಧರ್ಮಶ್ರೀ, ಉಜಿರೆ ಅವರು ಮಾತನಾಡಿ, ‘ಇಂದಿನ ಸಾಮಾಜಿಕ ಜೀವನದಲ್ಲಿ ಅವಶ್ಯಕವಿರುವ ನಾಯಕತ್ವ, ಸೇವಾಮನೋಭಾವನೆ ಹಾಗೂ ಜೀವನ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳು ಅತ್ಯುತ್ತಮ ವೇದಿಕೆ’ ಎಂದರು.
ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ, ಸರ್ವರನ್ನೂ ಸ್ವಾಗತಿಸಿದರು.
ಶತಾಬ್ದಿ ವಿದ್ಯಾಲಯ ಸಮಿತಿ (ರಿ.) ಮುಂಡಾಜೆ ಇದರ ಸಂಚಾಲಕರಾದ ನಾರಾಯಣ ಫಡ್ಕೆ ಯುವ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ನಾಯಕರಿಗೆ ಕಾಲೇಜಿನ ಪ್ರಾಂಶುಪಾಲೆ ಗೀತಾ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಾಯಕರುಗಳ ಪ್ರಾಪ್ತಿ, ಮೋಕ್ಷಿತ್, ಅನೀಕ್ಷಾ ಹಾಗೂ ಯಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿ ಪ್ರತಿನಿಧಿಗಳ ಪರವಾಗಿ ಪ್ರಾಪ್ತಿ ತಮ್ಮ ಮಂತ್ರಿ ಮಂಡಲದ ಮುಂದಿನ ಯೋಚನೆ-ಯೋಜನೆಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ನಮಿತಾ ಕೆ. ಆರ್. ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ವಂದಿಸಿದರು. ಎಲ್ಲಾ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.

Related posts

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿ

Suddi Udaya
error: Content is protected !!