September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

ಬೆಳ್ತಂಗಡಿ : : ಸಂತ ತೆರೆಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಇನ್ವೆಸ್ಟಿಚರ್ ಸಮಾರಂಭವು ಇಂದು ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ಹಾ, ಮ್ಯಾನೇಜರ್ ಭಗಿನಿ ತೆರೇಸಿಯ ಶೇರಾ, ಮುಖ್ಯ ಅತಿಥಿಗಳಾದ ವಿನ್ಸೆಂಟ್ ಪಿಂಟೋ ಕಥೋಲಿಕ್ ಕೊಆಪರೇಟಿವ್ ಸೊಸೈಟಿಯ ನಿರ್ದೇಶಕರು, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಆಲ್ವಿನ್ ಜೋನ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಮುಖ್ಯ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಆಗಮಿಸಿರುವ ಅತಿಥಿ ಗಳನ್ನು ಉಪ ಪ್ರಾಂಶುಪಾಲರಾದ ಭಗಿನಿ ಸಹಾಯ ಮೇರಿ ಸ್ವಾಗತಿಸಿದರು . ಸಮಾರಂಭದಲ್ಲಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಾದ ಶಾನನ್ ಸೆರಾವೋ , ಉಪನಾಯಕಿಯಾದ ಜೆನೀಫರ್ ಫರ್ನಾಂಡೆಸ್ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳಿಗೆ ಬ್ಯಾಡ್ಜ್ ಮತ್ತು ಅಧಿಕಾರದ ಚಿಹ್ನೆಗಳನ್ನು ನೀಡಿ ಅಧಿಕಾರ ವಹಿಸಲಾಯಿತು. ಬಳಿಕ ಅವರು ಪ್ರಮಾಣ ವಚನ ಸ್ವೀಕರಿಸಿ ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಸಂಕಲ್ಪ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಂಶುಪಾಲರು , “ನಾಯಕತ್ವ ಎಂದರೆ ಕೇವಲ ಅಧಿಕಾರವಲ್ಲ, ಅದು ಜವಾಬ್ದಾರಿ ಮತ್ತು ಸೇವೆಯ ಮನೋಭಾವವಾಗಿದೆ. ವಿದ್ಯಾರ್ಥಿಗಳು ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಕಾಲೇಜಿನ ಅಭಿವೃದ್ಧಿಗೆ ಕೈಜೋಡಿಸಬೇಕು” ಎಂದು ತಿಳಿಸಿದರು.


ಮುಖ್ಯ ಅತಿಥಿಗಳು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ, ಶಿಸ್ತು, ಪ್ರಾಮಾಣಿಕತೆ ಮತ್ತು ತಂಡದ ಸಹಕಾರದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮವನ್ನು ಸ್ವಾಗತಿಸಿ . ನೂತನ ಮಂತ್ರಿ ಮಂಡಳದ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿ ವಿಜ್ಞಾನ ವಿಭಾಗದ ಉಪನ್ಯಾಸಕಿ ಹಂಸಶ್ರೀ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya
error: Content is protected !!