September 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

ಬಳಂಜ: ಅಗ್ನೀವೀರ್ ಮೂಲಕ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರು ಇಂದಿನ ಯುವ ಸಮಾಜಕ್ಕೆ ಪ್ರೇರಣೆ‌ ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಹೇಳಿದರು.

ಭಾರತೀಯ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರದಲ್ಲಿ ಜೂ 21ರಂದು ರಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ರಂಜಿತ್ ಪೂಜಾರಿಯವರನ್ನು ಮಂಡಳಿಯ ವತಿಯಿಂದ ಶಾಲು, ಪೇಟ, ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಂಜಿತ್ ಪೂಜಾರಿಯವರು ಭಾರತೀಯ ಸೇನೆಗೆ ಆಯ್ಕೆಯಾಗಲು ಪಟ್ಟ ಪ್ರಯತ್ನ ಹಾಗೂ ಸವಾಲುಗಳ ಕುರಿತು ಮಂಡಳಿಯ ಸದಸ್ಯರೊಂದಿಗೆ ಮಾಹಿತಿಯನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕಾರ್ಯದರ್ಶಿ ರಂಜಿತ್ ಪೂಜಾರಿ, ನಾಲ್ಕೂರು, ಯುವ ಶಕ್ತಿ ತಂಡದ ಪ್ರಮುಖರಾದ ಸಂತೋಷ್ ಕುಮಾರ್ ಹಿಮರಡ್ಡ,ಶರತ್ ಅಂಚನ್,ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಸಿದ್ದಿ ಶೆಟ್ಟಿ ಉಪಸ್ಥಿತರಿದ್ದರು.

ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ‌ ಸ್ವಾಗತಿಸಿ, ನಿರೂಪಿಸಿದರು.ತರಭೇತುದಾರೆ ಮಾನ್ಯ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Related posts

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಬಂದಾರು: ಮೈರೋಳ್ತಡ್ಕ ಶಿವ ಗೆಳಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya
error: Content is protected !!