September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀಧ.ಮಂ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುದುವೆಟ್ಟು: ಇಲ್ಲಿನ ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಜಿರೆ ಎಸ್.ಡಿ.ಎಂ. ಈಜು ಕೊಳದ ತರಬೇತುದಾರರು ಹಾಗೂ ಯೋಗ ತರಬೇತುದಾರರಾದ ಶೀನ ಅವರು ಯೋಗದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಶೀನ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ನೀಡಿ, ಅವುಗಳ ಪ್ರಯೋಜನಗಳ ಕುರಿತು ಮಾರ್ಗದರ್ಶನ ಮಾಡಿದರು. ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!