27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 22 ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಸಭಾಭವನದಲ್ಲಿ ನೆರವೇರಿಸಲಾಯಿತು.

ವಿದ್ಯಾರ್ಥಿಯಾದ ಮನ್ವಿತ್ ರವರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿ ಮಾತನಾಡಿ ಯೋಗವು ನಮ್ಮ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ನಾವು ಪ್ರತಿದಿನ ಯೋಗ ಮಾಡಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯವನ್ನು ಕೋರಿದರು.

ಮುಖ್ಯ ಅತಿಥಿಗಳಾಗಿ ಮೂಡಬಿದ್ರೆಯ ಅಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜಿನಲ್ಲಿ ಕ್ಲಿನಿಕಲ್ ಯೋಗ ವಿಭಾಗದ 2ನೇ ವರ್ಷದ ಎಂ.ಡಿ. ವಿದ್ಯಾರ್ಥಿನಿಯಾದ ಡಾ| ಶ್ರೀಶ ಶೆಟ್ಟಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಯೋಗವು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಯೋಗವು ನಮ್ಮ ಶಿಸ್ತು ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ನಾವು ಪ್ರತಿದಿನ ಯೋಗ ಮಾಡಿದರೆ, ನಮ್ಮ ಮಾನಸಿಕ ಆರೋಗ್ಯವೂ ಉತ್ತಮವಾಗುತ್ತದೆ.ಎಂದು ಹೇಳಿ ಮಕ್ಕಳಿಗೆ ಅಂತಾರಾಷ್ಟಿಯ ಯೋಗ ದಿನಾಚರಣೆಯ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ ರವರು,ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರವಿಂದ್ರ ರೈ ರವರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಪಲ್ಲವಿ ನಿರೂಪಿಸಿ, ಸುಹಾನ್ ಸ್ವಾಗತಿಸಿ, ದೀಕ್ಷಿತ್ ಧನ್ಯವಾದವನ್ನು ಸಮರ್ಪಿಸಿದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya
error: Content is protected !!