September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನೋಡಿ  ಸ.ಉ. ಪ್ರಾ. ಶಾಲೆಯಲ್ಲಿ  ನವೀಕೃತ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯ ಉದ್ಘಾಟನೆ

ಲಾಯಿಲ: ಕರ್ನೋಡಿ  ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ ನವೀಕರಣಗೊಂಡ ಎಲ್. ಕೆ. ಜಿ ಮತ್ತು ಯು. ಕೆ. ಜಿ ತರಗತಿ ಕೊಠಡಿಯ  ಉದ್ಘಾಟನಾ ಕಾರ್ಯಕ್ರಮವು ಜೂ.  22  ರಂದು ಶಾಲೆಯಲ್ಲಿ ನಡೆಯಿತು. 

ಕೊಠಡಿ ಉದ್ಘಾಟನೆಯನ್ನು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಸಂಚಾಲಕ  ಮೋಹನ್ ಕುಮಾರ್  ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷೆ  ಸೌಮ್ಯಾ  ವಹಿಸಿದ್ದರು. 

ಮುಖ್ಯ ಅಥಿತಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಸುರೇಶ್ ಶೆಟ್ಟಿ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ನಿಯೋಜಿತ ಅಧ್ಯಕ್ಷ ಶ್ರೀಧರ್ ಕೆ.ವಿ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಸಂತೋಷ್ ಕುಮಾರ್, ಗ್ರಾಮ ಪಂಚಾಯತ್ ಅಭಿವೃದಿ ಅಧಿಕಾರಿ ತಾರಾನಾಥ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ  ಧನಂಜಯ್ ರಾವ್, ಶಾಲಾ ಮುಖ್ಯೋಪಾಧ್ಯಾಯರಾದ   ಜಗನ್ನಾಥ್. ಎಮ್  ಉಪಸ್ಥಿತರಿದ್ದರು.

ಎಲ್. ಕೆ. ಜಿ ಮತ್ತು ಯು.ಕೆ.ಜಿ  ತರಗತಿಯ ಪುಟಾಣಿ ಮಕ್ಕಳಿಗೆ ಮೋಹನ್ ಕುಮಾರ್  ರವರು ಬ್ಯಾಗ್ ಮತ್ತು ಕೊಡೆಯನ್ನು ಉಚಿತವಾಗಿ ವಿತರಿಸಿದರು. ಕೊಠಡಿ ನವೀಕರಣಕ್ಕೆ ಸಹಕರಿಸಿದ ದಾನಿಗಳನ್ನು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಗೌರವಿಸಲಾಯಿತು. ಸಹ ಶಿಕ್ಷಕಿ ಉಷಾ. ಕೆ. ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಧನಂಜಯ ರಾವ್ ಸ್ವಾಗತಿಸಿದರು. ಸಹ ಶಿಕ್ಷಕ ಕೃಷ್ಣ ಕುಮಾರ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಬಾಲಕೃಷ್ಣ  ನೈಮಿಷಾ  ಸೌತಡ್ಕ, ಪ್ರವೀಣ್ ಶೆಟ್ಟಿ, ವೆಂಕಟೇಶ್ ಕಾಶಿಬೆಟ್ಟು, ಮುರಳಿ, ಬೆನಕಾ ಎಲೆಕ್ಟ್ರಿಕಲ್ಸ್, ಪ್ರಕಾಶ್ ಜೈನ್ ಬಳೆಂಜ, ಮೊಹಮದ್ ಅಲೀ ಕಕ್ಕೇನ, ಸುಜಿತ್ ಗುರಿಂಗಾನ, ಕರೀಂ ಹಾಜಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್.ಆರ್ ಕೋಶಾಧಿಕಾರಿ ಸದಾಶಿವ ಸಮಗಾರ, ಉಪಾಧ್ಯಕ್ಷರಾದ ಆಶ್ರಫ್ ಮಾಂಜಾಲ್, ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಶ್ರೀಮತಿ ದಿವ್ಯ, ಮತ್ತು ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲಾ ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
error: Content is protected !!