27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೂ.27: ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ- ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ವಾ ಟ್ರಸ್ಟ್ ಟ್ರಸ್ಟ್ (ರಿ.), ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ.) ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ & ಮಹಿಳಾ ಯುವ ವೇದಿಕೆ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇದರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು, ಲಾಯಿಲ ಬೆಳ್ತಂಗಡಿ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದ ಮತ್ತು ಬೃಹತ್ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಜೂ.27 ರಂದು ಪೂರ್ವಾಹ್ನ 9 ರಿಂದ ಲಾಯಿಲ ಸಂಗಮ ಸಭಾಭವನದಲ್ಲಿ ಜರುಗಲಿದೆ ಎಂದು ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಲಾಯಿಲ ಇದರ ಅಧ್ಯಕ್ಷ ಕೆ. ಗಂಗಾಧರ ಗೌಡ ವಹಿಸಲಿರುವರು. ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅಧ್ಯಕ್ಷತೆಯನ್ನು ವಹಿಸಲಿರುವರು.

ಒಕ್ಕಲಿಗ ಗೌಡರ ಸಂಘ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಅಧ್ಯಕ್ಷ ರಂಜನ್ ಜಿ. ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರುವರು.

ಭಾಗವಹಿಸುವ ವಿಭಾಗಗಳು:- ಸಾಮಾನ್ಯ ರೋಗ ವಿಭಾಗ , ಎಲುಬು ಮತ್ತು ಕೀಲು ರೋಗ ವಿಭಾಗ , ಕಣ್ಣಿನ ವಿಭಾಗ , ಕಿವಿ, ಮೂಗು ಮತ್ತು ಗಂಟಲು ವಿಭಾಗ, ದಂತ ಚಿಕಿತ್ಸೆ.

ಶಿಬಿರದಲ್ಲಿ ಲಭ್ಯವಿರುವ ಸೌಲಭ್ಯಗಳು: ಉಚಿತ ಬಿ.ಪಿ. ಹಾಗೂ ಮಧುಮೇಹ (ಶುಗರ್) ತಪಾಸಣೆ, ರಿಯಾಯಿತಿ ದರದಲ್ಲಿ (ರೂ. ೮೦ ಮಾತ್ರ) ಓದುವ ಕನ್ನಡಕ, ಉಚಿತ ಔಷಧ ವಿತರಣೆ (ಲಭ್ಯವಿರುವ ಔಷಧಗಳು ಮಾತ್ರ), ಹುಳುಕು ಹಲ್ಲುಗಳಿಗೆ ಸಿಮೆಂಟ್ ತುಂಬಿಹುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು ಇತ್ಯಾದಿ.

ವಿಶೇಷ ಸೂಚನೆ: ಶಿಬಿರಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಹಸಿರು ಕಾರ್ಡು ನೀಡಲಾಗುವುದು. ಈ ಹಸಿರು ಕಾರ್ಡು ಮೂಲಕ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಒಳರೋಗಿಯಾಗಿ ದಾಖಲಾದಲ್ಲಿ ಶಸ್ತ್ರಚಿಕಿತ್ಸೆಗೆ ಗರಿಷ್ಠ ರೂ. 10000/-ಮತ್ತು ಇತರ ಚಿಕಿತ್ಸೆಗೆ ಗರಿಷ್ಠ ರೂ.5000/- ದವರೆಗೆ ರಿಯಾಯಿತಿಯಲ್ಲಿ ಆಸ್ಪತ್ರೆಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya
error: Content is protected !!