September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

ಬೆಳ್ತಂಗಡಿ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಸೈನ್ಸ್ ಹಾಗೂ ಇಕೋ ಕ್ಲಬ್ ವತಿಯಿಂದ “Nurturing Nature Through Seed Balls” ಎಂಬ ವಿಶೇಷ ಚಟುವಟಿಕೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಜೀವ ವೈವಿಧ್ಯದ ಮಹತ್ವದ ಕುರಿತು ಅರಿವು ಮೂಡಿಸುವುದಾಗಿತ್ತು.

ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ. ಆರ್ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೈನ್ಸ್ ಮತ್ತು ಇಕೋ ಕ್ಲಬ್‌ನ ಶಿಕ್ಷಕಿಯರಾದ ಶ್ರೀಮತಿ ಸೌಮ್ಯ ಪಿ, ಶ್ರೀಮತಿ ನಯನ ಹಾಗೂ ಶ್ರೀಮತಿ ಪ್ರಮೀಳಾ ಎನ್ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಶಾಲೆಯ ಸಹಶಿಕ್ಷಕಿಯಾದ ಶ್ರೀಮತಿ ಸೌಮ್ಯ ಪಿ ಅವರು ಬೀಜ ಉಂಡೆಗಳ ತಯಾರಿಕೆ, ಅವುಗಳ ಉಪಯೋಗ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಅವುಗಳ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳು ಉತ್ಸಾಹದಿಂದ ಬೀಜ ಉಂಡೆಗಳನ್ನು ತಯಾರಿಸಿ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಿದರು.

ಈ ಚಟುವಟಿಕೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಕೃತಿಯ ಬಗ್ಗೆ ಪ್ರೀತಿ, ಪರಿಸರದ ಜವಾಬ್ದಾರಿ ಹಾಗೂ ಮರಗಳ ಸಂರಕ್ಷಣೆಯ ಅಗತ್ಯತೆಯ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Related posts

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ಸಾವ್ಯ ಬಿಜೆಪಿ ಕಾರ್ಯಕರ್ತರಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಅಭಿನಂದನೆ

Suddi Udaya
error: Content is protected !!