September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

ಕೊಕ್ಕಡ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಇಂದು (ಜೂ.24) ಬೆಳಗ್ಗೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೃತಪಟ್ಟವರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಮ್ ನಿವಾಸಿ ರಿಜೇಶ್.ವಿ (33) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೋರ್ವ ಬೈಕ್ ಸವಾರನನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಹಾಗೂ ಸಂಗಮ್ ಪಿಕಪ್ ವಾಹನ ಚಾಲಕ ಗಿರೀಶ್ ಎಂದು ಗುರುತಿಸಲಾಗಿದೆ.


ಗಿರೀಶ್ ಅವರು ಗುಂಡ್ಯದಿಂದ ಕೊಕ್ಕಡ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದು ಪೆರಿಯಶಾಂತಿ ಸಮೀಪ ತಮ್ಮ ಬೈಕ್‌ನ್ನು ಕೊಕ್ಕಡದ ಕಡೆಗೆ ತಿರುಗಿಸುವ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಆ ಬೈಕ್‌ನಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ರಿಜೇಶ್ ಅವರು ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಅಪಘಾತದಲ್ಲಿ ಮೃತಪಟ್ಟ ರಿಜೇಶ್ ಅವರ ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Related posts

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya
error: Content is protected !!