27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀರಾಮನಿಗೆ ಅವಹೇಳನ: ಪ್ರೊ. ಕೆ. ಎಸ್. ಭಗವಾನ್ ಬಂಧನಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ : ಹಿಂದೂ ಧರ್ಮ, ಪ್ರಭು ಶ್ರೀರಾಮ ಹಾಗೂ ಹಿಂದೂ ದೇವತೆಗಳ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಪ್ರೊ. ಕೆ. ಎಸ್. ಭಗವಾನ್ ಅವರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ರವರ ಮುಖೆನ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪ್ರೊ. ಕೆ. ಎಸ್. ಭಗವಾನ್ ಅವರು, ಪ್ರಭು ಶ್ರೀರಾಮನ ಜನನ ಮತ್ತು ಹಿಂದೂ ಧರ್ಮದ ಶ್ರದ್ಧಾಕೇಂದ್ರಗಳು ಹಾಗೂ ಆಚರಣೆಗಳ ಕುರಿತು ಅತ್ಯಂತ ಅಶ್ಲೀಲ, ಧರ್ಮದ್ರೋಹಿ ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಿದ್ದಾರೆ. ಈ ವಿವಾದಾತ್ಮಕ ಮಾತುಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವುಂಟುಮಾಡಿದೆ. ಇಂತಹ ಪ್ರಚೋದನಾತ್ಮಕ ಹೇಳಿಕೆಗಳು ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕದಡುವ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಬೆಳೆಸುವ ವ್ಯವಸ್ಥಿತ ಸಂಚಾಗಿದೆ ಎಂದು ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂದರ್ಭದಲ್ಲಿ ಧರ್ಮ ಜಾಗರಣ ತಾಲೂಕು ಸಂಯೋಜಕ ತೀಕ್ಷಿತ್ ಕೆ, ವಿಶ್ವಹಿಂದು ಪರಿಷತ್ ತಿಮ್ಮಪ್ಪ ಗೌಡ ಬೆಳಾಲು , ಶಿರ್ಲಾಲು ಗ್ರಾಮ ಸಮಿತಿ ಸದಸ್ಯ ಉಮೇಶ್ ಸುವರ್ಣ, ಇಂದಬೆಟ್ಟು ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು, ಜಯಶಂಕರ್ ಹೆಗ್ಡೆ ವೇಣೂರು, ಅನಿಲ್ ಶೆಟ್ಟಿ ಪೀಳ್ಯ, ಪ್ರವೀಣ್ ಹೆಚ್ ವೇಣೂರು, ಗಣೇಶ್ ಕುಂದರ್ ಕುಕ್ಕೇಡಿ, ರಮೇಶ್ ಪೂಜಾರಿ ನಿಟ್ಟಡೆ, ಸದಾಶಿವ ಶೆಟ್ಟಿ ಅಳದಂಗಡಿ, ವಿಶ್ವನಾಥ ದೇವಾಡಿಗ ವೇಣೂರು, ಧರ್ನಪ್ಪ ಪೂಜಾರಿ ನಿಟ್ಟಡೆ, ವಿಘ್ನೇಶ್ ಆಚಾರ್ಯ ಬೆಳ್ತಂಗಡಿ, ಪ್ರಥಮೇಶ್ ಬೆಳ್ತಂಗಡಿ, ಕೇಶವ ಅಚ್ಚಿನಡ್ಕ, ಯೋಗೀಶ್ ಕೆಂಬರ್ಜೆ, ಹರೀಶ್. ಜಿ ಸೇರಿದಂತೆ ಹಲವು ರಾಮ ಭಕ್ತರು ಹಾಗೂ ಹಿಂದೂ ಧರ್ಮಪ್ರೇಮಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!