27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗಾಗಿ “ಸ್ವಾಗತಂ – 2026-27” ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಜೂ 23ರಂದು ಆಯೋಜಿಸಲಾಯಿತು.

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪದ್ಮನಾಭ ಕೆ ಮಾತನಾಡಿ ಉನ್ನತ ಶಿಕ್ಷಣದಲ್ಲಿ ವಾಣಿಜ್ಯ ಶಿಕ್ಷಣದ ಮಹತ್ವ, ಉದ್ಯೋಗಾವಕಾಶಗಳು ಹಾಗೂ ವ್ಯಕ್ತಿತ್ವ ವಿಕಸನದ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಶಿಸ್ತು, ಮೌಲ್ಯಗಳು ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯ ಯಶಸ್ಸಿಗಾಗಿ ಸದಾ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ವಿದ್ಯಾಸಾಗರ ಕ್ಯಾಂಪಸ್‌ನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ ಕಾಲೇಜು ಜೀವನವನ್ನು ಸಾರ್ಥಕವಾಗಿ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ ಕೆ ಇವರು ಕಾಲೇಜಿನ ಶೈಕ್ಷಣಿಕ ಸಾಧನೆ ಹಾಗೂ ನೂತನ ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿಭಾಗದ ಕಾರ್ಯಪದ್ಧತಿ ಹಾಗೂ ಭವಿಷ್ಯದ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ SSLC ಸಾಧಕರನ್ನು ಗೌರವಿಸಲಾಯಿತು.ಅಮನ್ನ ಅಮೀನಾ ಕಾರ್ಯಕ್ರಮ ನಿರೂಪಿಸಿ, ಶೌರ್ಯ ಸ್ವಾಗತಿಸಿ, ಆದಿತ್ಯ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐತಿಹಾಸಿಕ ಸಾಧನೆ:ರೂ.2.89 ಕೋಟಿ ನಿವ್ವಳ ಲಾಭ, ಅಧ್ಯಕ್ಷ ಪ್ರೀತಮ್ ಅವರಿಂದ ಸದಸ್ಯರಿಗೆ ಶೇ.21 ಡಿವಿಡೆಂಡ್ ಘೋಷಣೆ

Suddi Udaya

ನಾಟ (NATA) 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya
error: Content is protected !!