September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಜೂ. 24ರಂದು ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ, ಇಲ್ಲಿ ನಡೆಯುತ್ತಿರುವ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಿರಿ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಡಾ.ಹೆಗ್ಗಡೆ ದಂಪತಿಗಳನ್ನು ,ಹೆಗ್ಗಡೆಯವರ ಮೊಮ್ಮಗಳಾದ ಕು| ಮಾನ್ಯರವರರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ಧ್ಯೇಯೋದ್ದೇಶದಿಂದ ಸಿರಿ ಸಂಸ್ಥೆಗೆ ಸುಸಜ್ಜಿತವಾದ,ಭವ್ಯ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟು, ಇಲ್ಲಿ ಕೆಲಸಮಾಡುವ ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಸಂಸ್ಥೆಯ ಸಿರಿ ಸಿಬ್ಬಂದಿಗಳ ಶ್ರೇಯೋಭಿವೃದ್ಧಿಯನ್ನು ಬಯಸುತ್ತಿರುವ ಡಾ.ಹೆಗ್ಗಡೆ ದಂಪತಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆಗಳನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸೇಲಂನಲ್ಲಿರುವ ಇಸ್ಕಾನ್ ದೇವಾಲಯದ ಶ್ರೀರಾಮಪ್ರಭು ಚಂದನದಾಸ ಸ್ವಾಮೀಜಿಯವರು, ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ, ಎಸ್.ಕೆ.ಡಿ.ಆರ್.ಡಿ.ಪಿ ಬಿ.ಸಿ ಟ್ರಸ್ಟ್ ನ ಟ್ರಸ್ಟಿಗಳಾದ ಡಾ. ಹರೀಶ್ ಕೃಷ್ಣ ಸ್ವಾಮಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!