27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಜೂ.25): ಬೆಳ್ತಂಗಡಿ ವಕೀಲರ ಸಂಘದ ಗ್ರಂಥಾಲಯ ಮತ್ತು ಜನರೇಟರ್ ಉದ್ಘಾಟನೆ

ಬೆಳ್ತಂಗಡಿ : ವಕೀಲರ ಸಂಘದ ಸದಸ್ಯರ ಅನುಕೂಲಕ್ಕಾಗಿ ಸಂಘದ ಹಿರಿಯ ಸದಸ್ಯ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರವರ ಪ್ರದೇಶಾಭಿವೃದ್ಧಿ ಅನುದಾನದಿಂದ ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರಂಥಾಲಯ ಮತ್ತು ಜನರೇಟರ್ ಸೌಲಭ್ಯಗಳ ಉದ್ಘಾಟನಾ ಕಾರ್ಯಕ್ರಮವು ಜೂ.25ರಂದು ಅಪರಾಹ್ನ1 ಗಂಟೆಗೆ ವಕೀಲರ ಭವನದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರವರು ನಡೆಸಲಿದ್ದು ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಶ್ರೇಣಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಮನು ಬಿ.ಕೆ, ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ರಾಮಲಿಂಗಪ್ಪ, ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್, ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಮತ್ತು ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಶಿವ ಕುಮಾರ್ ಎಸ್.ಎಂ ಭಾಗವಹಿಸಲಿದ್ದಾರೆ.

Related posts

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya
error: Content is protected !!