September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಮಂತ್ರಿ ಮಂಡಲದ ಬಗ್ಗೆ ಕಲ್ಪನೆ ಮೂಡುವ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ವಿನೂತನ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ವನದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಬೊಮ್ಮಣ್ಣ ಗೌಡರವರು ಆಗಮಿಸಿ ಶಾಲಾ ಹಂತದಲ್ಲಿ ಮಂತ್ರಿಮಂಡಲದ ಸಂಪೂರ್ಣ ವಿಚಾರ ತಿಳಿಸಿದರು ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ನಾಯಕರಾಗುವ ಗುಣ ಮೈಗೂಡುತ್ತದೆ ಎಂದು ತಿಳಿಸಿದರು.

ಮಂತ್ರಿಗಳ ಖಾತೆ ಜವಾಬ್ದಾರಿಯನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶೀಲಾ ತಿಳಿಸಿದರು. ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಬೋಧಿಸಿದರು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ತೇಜಾವತಿ ಸ್ವಾಗತಿಸಿ , ಯಶೋದ ಧನ್ಯವಾದವಿತ್ತರು. ಶಾಲಾ ಶಿಕ್ಷಕ ಗೌರೀಶ್ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಜು.2: ಬೆಳ್ತಂಗಡಿ ರೋಟರಿ ಕ್ಲಬ್‌ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಆಹಾರ ಮೇಳ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya
error: Content is protected !!