27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾ.ಪಂ. ವತಿಯಿಂದ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ

ಲಾಯಿಲ : ಗ್ರಾಮೀಣ ಭಾಗದ ಸಾಂಪ್ರದಾಯಿಕ ತಿಪ್ಪೆಗಳಲ್ಲಿ ಕೃಷಿ ತ್ಯಾಜ್ಯದ ಜೊತೆಗೆ ಪ್ಲಾಸ್ಟಿಕ್ ಸೇರುತ್ತಿರುವುದು ಪರಿಸರ ಮತ್ತು ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನಲೆಯಲ್ಲಿ, ಹಳ್ಳಿಗಳನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತಗೊಳಿಸಲು ಜೂ.12 ರಿಂದ ಜೂ.26 ರವರೆಗೆ ಎರಡು ವಾರಗಳ ಕಾಲ ಗ್ರಾಮೀಣ ಭಾಗದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದ್ದು ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಜೂ.24 ರಂದು ಲಾಯಿಲ ಗ್ರಾಮದ ಭಾರತ್ ಮಾತಾ ಸಭಾ ಭವನದಲ್ಲಿ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ ನಡೆಸಿ ಲಾಯಿಲ ಜಂಕ್ಷನ್ ಬಳಿಯಿಂದ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ವಿಶೇಷ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಪಂಚಾಯತ್ ಸ್ವಚ್ಛತಾ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ. ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Related posts

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!