August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನಾ ವಿಧಾನ – ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧ. ಮಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನಾ ವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮವು ಜೂ.25 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಂ. ಕಾಲೇಜಿನ ಬಿ. ವೋಕ್ ವಿಭಾಗದ ಸಹಪ್ರಾಧ್ಯಾಪಕ ಡಾ. ಶಶಾಂಕ್ ಬಿ ಎಸ್ ಮಾತನಾಡಿ ಸಂಶೋಧನೆ ಎಂಬುದು ನಿರಂತರವಾದ ಪ್ರಕ್ರಿಯೆ. ನಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಲು ಸಂಶೋಧನೆಯು ಸಹಾಯಕವಾಗಿದೆ. ಸಂಶೋಧನೆಯಲ್ಲಿ ಮುಖ್ಯವಾಗಿ ಗುಣಾತ್ಮಕ ಹಾಗೂ ಪರಿಮಾಣಾತ್ಮಕವಾಗಿ ಅಧ್ಯಯನವನ್ನು ಮಾಡಲಾಗುತ್ತದೆ. ಸಂಶೋಧನೆಯನ್ನು ಕ್ರಮಬದ್ಧವಾಗಿ ಕೈಗೊಳ್ಳಲು ಬಳಸುವ ವೈಜ್ಞಾನಿಕ ಪ್ರಕ್ರಿಯೆ ಮತ್ತು ತಂತ್ರಗಳೇ ಸಂಶೋಧನಾ ವಿಧಾನಗಳು. ನಮ್ಮ ಅಧ್ಯಯನದ ಗುರಿ ಉದ್ದೇಶಗಳನ್ನು ಸಾಧಿಸಲು ಮತು ಸಂಶೋಧನೆಗೆ ಅನುಗುಣವಾದ ದತ್ತಾಂಶವನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಲಾಗುತ್ತದೆ ಹಾಗೂ ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಹಾಗೂ ತಾರ್ಕಿಕ ಚಿಂತನೆಯನ್ನು ಬೆಳೆಸುವುದರೊಂದಿಗೆ ವಾಸ್ತವಿಕ ಸತ್ಯಾಂಶಗಳನ್ನು ನಿರ್ಣಯಿಸಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಸಂಶೋಧನಾ ವಿಧಾನಗಳು ಮುಂದಿನ ಕಲಿಕೆಗೆ ಪ್ರೇರಣೆ ನೀಡುತ್ತದೆ. ಆದುದರಿಂದ ಮುಂದಿನ ಭವಿಷ್ಯಕ್ಕಾಗಿ ನೀವೆಲ್ಲರೂ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿಯರಾದ ಶ್ರವಣ ಮಹಾಪುರುಷ ಮತ್ತು ರಂಝೀನಾ ಉಪಸ್ಥಿತರಿದ್ದರು.
ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಸಾಯಿಧೃತಿ ಮತ್ತು ಬಳಗ ಪ್ರಾರ್ಥಿಸಿ, ಗಾಯತ್ರಿ ಸ್ವಾಗತಿಸಿ, ಯಶಸ್ವಿನಿ ವಂದಿಸಿ, ಪೂಜಾ ಎ ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya
error: Content is protected !!