27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ.ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಕ್ರಮ

ಪಡಂಗಡಿ : ಮಹಾತ್ಮ ಗಾಂಧಿ ಪಡಂಗಡಿ ಗ್ರಾಮ ಪಂಚಾಯತಿಯಲ್ಲಿ ಸ್ವಚ್ಛತೆಯ ಕುರಿತು ಮಾಹಿತಿ ಕಾರ್ಯಕ್ರಮವು ಜರುಗಿತು.

ತನ್ನ ಮನೆ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಇಡೀ ಗ್ರಾಮವು ಸಮಗ್ರವಾಗಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ಸಾಧ್ಯ. ಆದ್ದರಿಂದ ಪ್ರತೀ ಮನೆಯ ಸದಸ್ಯರು ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಿ, ಮನೆಯಲ್ಲಿ ಉತ್ಪತ್ತಿಯಾಗುವ ಹಸಿಕಸವನ್ನು ತಮ್ಮ ಮನೆಯ ಹಂತದಲ್ಲೇ ಸೂಕ್ತವಾಗಿ ವಿಲೇವಾರಿ ಮಾಡಿ ಒಣಕಸವನ್ನು ಗ್ರಾಮ ಪಂಚಾಯತಿಯ ಸ್ವಚ್ಛವಾಹಿನಿಗೆ ನೀಡುವಂತೆ ಮತ್ತು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಆರೋಗ್ಯಕರವಾದ ಜೀವನ ನಡೆಸುವಂತೆ ಆರೋಗ್ಯ ಕಾರ್ಯಕರ್ತೆಯವರಾದ ಪ್ರೀತಿ ಶೆಟ್ಟಿ ಮಾಹಿತಿ ನೀಡಿದರು.

ಮಹಾತ್ಮ ಗಾಂಧಿ ಪಡಂಗಡಿ ಗ್ರಾಮ ಪಂಚಾಯತಿಯ ವ್ಯಾಪ್ತಿಯು ನಿರಂತರವಾಗಿ ಸ್ವಚ್ಛತೆಯಿಂದ ಕೂಡಿರಲು ಪ್ರತೀ ಮನೆಯವರ ಸಹಕಾರ ಅತೀ ಅಗತ್ಯವೆಂದು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಬಂದಾರು : ಟೈಲರ್ ರಾಘವ ನಿಧನ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya
error: Content is protected !!