September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ಪಿ.ಯು.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ : ‘ಶಿಸ್ತಿನ ಪಾಠ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ. ಬದುಕಿನುದ್ದಕ್ಕೂ ನಾವು ಮಾನವ ಸಂಬಂಧಗಳಿಗೆ ಬೆಲೆ ಕೊಡಬೇಕು. ಅಂತಹ ಸಂಸ್ಕಾರಯುತ ಶಿಸ್ತಿನ ಬದುಕು ರೂಪಿಸುವಲ್ಲಿ ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆಗಳು ಸದಾ ಪ್ರೇರಣೆಯಾಗಲಿ’ ಎಂದು ಬೆಳ್ತಂಗಡಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ನಿಲಯ ಪಾಲಕ ಚಂದ್ರಪ್ಪ ಡಿ ಹೇಳಿದರು.

ಅವರು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 2026-2027 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಪ್ರೀತಿತ ಧರ್ಮ ವಿಜೇತ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ ಪ್ರತಿ ವಿದ್ಯಾರ್ಥಿ ಗುರಿಯ ಉತ್ತಮ ಗುರಿಯ ಕಡೆಗೆ ಸಾಗಬೇಕು. ಅವಕಾಶ ಸಿಕ್ಕಾಗ ಅದನ್ನು ತನ್ನದಾಗಿಸಿಕೊಳ್ಳಲು ಸದಾ ಕಾತರರಾಗಿರಬೇಕು’ ಎಂದರು

ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ , ವಿದ್ಯಾರ್ಥಿ ಸಂಘದ ಅಧ್ಯಕ್ಷೆ ರಕ್ಷಿತಾ, ಉಪಾಧ್ಯಕ್ಷ ಅಕ್ಷಯ ನಾಯ್ಕ್, ಕಾರ್ಯದರ್ಶಿ ಕೃಷ್ಣ ಹಾಗೂ ಜತೆ ಕಾರ್ಯದರ್ಶಿ ಐಶ್ವರ್ಯ ಇದ್ದರು.

ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು.
ಕನ್ನಡ ಭಾಷಾ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು ಅತಿಥಿ ಪರಿಚಯ ಮಾಡಿದರು. ಗಣಕ ವಿಜ್ಞಾನ ಉಪನ್ಯಾಸಕಿ ಚಂದನಾ ಹಾಗೂ ಭೌತಶಾಸ್ತ್ರ ಉಪನ್ಯಾಸಕಿ ಅನನ್ಯಾ ಕಾರ್ಯಕ್ರಮ ನಿರೂಪಿಸಿದರು. ರಸಾಯನಶಾಸ್ತ್ರ ಉಪನ್ಯಾಸಕಿ ಸೌಜನ್ಯ ವಂದಿಸಿದರು.

Related posts

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!