27.6 C
ಪುತ್ತೂರು, ಬೆಳ್ತಂಗಡಿ
September 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

ಬೆಳ್ತಂಗಡಿ: ಲಾಯಿಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶನಗರದಲ್ಲಿ ಸಾರ್ವಜನಿಕ ರಸ್ತೆಯನ್ನು ಖಾಸಗಿ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಸಂಚಾರ ತೊಂದರೆ ಉಂಟು ಮಾಡುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಲಾಯಿಲಾ ಬ್ರಾಂಚ್ ಸಮಿತಿಯ ವತಿಯಿಂದ ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸಾರ್ವಜನಿಕ ರಸ್ತೆಯನ್ನು ಅತಿಕ್ರಮಿಸಿ ಹಾಗೂ ದುರ್ಬಳಕೆ ಮಾಡುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಗ್ರಾಮಸ್ಥರೊಂದಿಗೆ ಸೇರಿ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಈ ಸಂದರ್ಭದಲ್ಲಿ ಲಾಯಿಲಾ ಬ್ರಾಂಚ್ ಅಧ್ಯಕ್ಷರಾದ ಅಸಿಫ್, ಲಾಯಿಲಾ ಬ್ಲಾಕ್ ಅಧ್ಯಕ್ಷರಾದ ಸಲೀಂ ಲಾಯಿಲಾ, ಕಾರ್ಯದರ್ಶಿ ಸಾದಿಕ್ ಲಾಯಿಲಾ ಹಾಗೂ ಸ್ಥಳೀಯರಾದ ಅಸಿಫ್, ಹಾರಿಶ್ ಮತ್ತು ಇರ್ಫಾನ್ ಉಪಸ್ಥಿತರಿದ್ದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಬೆಳ್ತಂಗಡಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಶಿಕ್ಷಕರ ದಿನಾಚರಣೆ : ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!