September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವು ಜರಗಿತು. ಈ ಕಾರ್ಯಕ್ರಮವು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಅವರ ನೇತೃತ್ವದಲ್ಲಿ ನಡೆಯಿತು.

ಹೊಸದಾಗಿ ಆಯ್ಕೆಯಾದ ಶಾಲಾ ವಿದ್ಯಾರ್ಥಿಗಳ ನಾಯಕ ಲವಿತ್ ಮತ್ತು ಉಪ ನಾಯಕ ಪರಶುರಾಮ ಹಾಗೂ ಮಂತ್ರಿಮಂಡಲದ ಸರ್ವ ಸದಸ್ಯರು ಪ್ರಮಾಣವಚನವನ್ನು ಸ್ವೀಕರಿಸಿದರು. ಶಾಲೆಯ ಕರ್ತವ್ಯ, ಶಿಸ್ತು, ಜವಾಬ್ದಾರಿ ಸರಿಯಾಗಿ ನಿಭಾಯಿಸುವುದಾಗಿ ಪ್ರತಿಜ್ಞೆ ಮಾಡಿದರು.

ಈ ಪ್ರತಿಜ್ಞಾವಿಧಿಯನ್ನು ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಎನ್. ನಿರ್ವಹಿಸಿದರು. ಶಾಲಾ ಶಿಕ್ಷಕ ವೃಂದದವರು, ಎಸ್ ಡಿ ಎಮ್ ಸಿ ಯ ಅಧ್ಯಕ್ಷ ಕೆ ನಂದ ಮಕ್ಕಳಿಗೆ ಶುಭವನ್ನು ಹಾರೈಸಿದರು. ಶಿಕ್ಷಕ ವೃಂದದವರು, ಜೊತೆಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹ ಶಿಕ್ಷಕ ನಾಗರಾಜ್ ಬಾರ್ಕೆರ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya
error: Content is protected !!