September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

ಬೆಳ್ತಂಗಡಿ: ಇಲ್ಲಿನ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗದಲ್ಲಿರುವ ಬೃಹತ್ ಮರವು ಗಾಳಿ-ಮಳೆಯ ಸಂದರ್ಭ ಮನೆಗಳ ಮೇಲೆ ಬೀಳುವ ಅಪಾಯವನ್ನು ತಂದೊಡ್ಡಿದ್ದು,ಸ್ಥಳೀಯ ನಿವಾಸಿಗಳು ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ.

ಈ ಬಗ್ಗೆ ಹಲವಾರು ಬಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಲಿಖಿತ ಹಾಗೂ ಮೌಖಿಕವಾಗಿ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ತೀವ್ರಗೊಂಡಿರುವ ಈ ಸಂದರ್ಭದಲ್ಲಿ ಮರವು ಯಾವ ಕ್ಷಣದಲ್ಲಾದರೂ ಮನೆಗಳ ಮೇಲೆ ಉರುಳಿ ಬಿದ್ದು ಜೀವಹಾನಿ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡುವ ಸಾಧ್ಯತೆ ಇದೆ. ಅಪಾಯದ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಇಲಾಖೆಯ ಉದಾಸೀನತೆಯನ್ನು ತೋರಿಸುತ್ತಿದೆ. ಯಾವುದೇ ದುರಂತ ಸಂಭವಿಸಿದ ಬಳಿಕ ಮಾತ್ರ ಅಧಿಕಾರಿಗಳು ಎಚ್ಚೆತ್ತುಕೊಳ್ಳುವರೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.


ಮುಂದೆ ಯಾವುದೇ ಜೀವಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿದಲ್ಲಿ ಅದರ ಸಂಪೂರ್ಣ ಹೊಣೆಯನ್ನು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳೇ ಹೊರಬೇಕಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಪಾಯಕಾರಿಯಾದ ಮರವನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಸಮಸ್ತ ಬೆಳ್ತಂಗಡಿ ಸಂಯುಕ್ತ ಜಮಾಅತ್ ಖಾಝಿಯಾಗಿ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್: ಕನ್ನಡಿಕಟ್ಟೆ ಮಸ್ಜಿದ್ ನಲ್ಲಿ ಕಾರ್ಯಕ್ರಮ ಸಂಪನ್ನ

Suddi Udaya
error: Content is protected !!