September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ ಆರೋಗ್ಯಕರ ವಯೋವೃದ್ಧಿಗಾಗಿ ಯೋಗ ಎಂಬ ಧ್ಯೇಯ ವಾಕ್ಯದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಬೌದ್ಧಿಕ್ ನೀಡಲಿರುವ ವಿಜಯ್ ಜಿ ಉಜಿರೆ ಸಂಘದ ಜಿಲ್ಲಾ ಸೇವಾ ಪ್ರಮುಖ್ ಹಾಗೂ ಪ್ರಕಾಶ್ ಕಟ್ಟೆ ತಾಲೂಕು ಶಾರೀರಿಕ ಪ್ರಮುಖ್ ಉಪಸ್ಥಿತರಿದ್ದರು. ವಿಜಯ್ ಜಿ ಇವರು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುವ ಪ್ರಾಚೀನ ಭಾರತೀಯ ಕಲೆಯಾದ ಯೋಗದ ಮಹತ್ವವನ್ನು ಸಾರಲು ಮತ್ತು ಅದನ್ನು ಜೀವನದ ಭಾಗವಾಗಿಸಲು ವಿಶ್ವ ಸಂಸ್ಥೆಯು 2014 ರಲ್ಲಿ ಜೂ.21ನ್ನು ಯೋಗ ದಿನವೆಂದು ಘೋಷಿಸಲಾಯಿತು. ಅಲ್ಲಿಂದ ಇಡೀ ವಿಶ್ವದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಬೌದ್ಧಿಕ್ ನೀಡಿದರು ಮುಂದಕ್ಕೆ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗಾಭ್ಯಾಸವನ್ನು ಮಾಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಹೊನ್ನಮ್ಮ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ವಂದಿಸಿದರು . ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!