September 24, 2026
ತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧ. ಮಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ ಎಂಬ ಕುರಿತು ಉಪನ್ಯಾಸ ಕಾರ್ಯಕ್ರಮವು ಇಂದು (ಜೂ.25) ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಿಭಾಗದ ಅಂಚೆ ಕಛೇರಿಯ ಮಾರ್ಕೆಟ್ ಎಕ್ಸಿಕ್ಯೂಟಿವ್ ಗುರುಪ್ರಸಾದ್ ಕೆ ಎಸ್ ಮಾತನಾಡಿದರು.

ಭಾರತೀಯ ಅಂಚೆ ಕಚೇರಿಯು ಒಂದು ಕಡೆಯಿಂದ ಇನ್ನೊಂದು ಕಡೆಗೆ ಕೇವಲ ಪತ್ರಗಳನ್ನು ತಲುಪಿಸುವುದಷ್ಟೇ ಅಲ್ಲದೆ, ಹಣಕಾಸು, ಉಳಿತಾಯ ಯೋಜನೆಗಳು, ಆಧಾರ್ ನವೀಕರಣ, ವಿಮೆ, ಪಾರ್ಸೆಲ್ ಸಾಗಣೆ ಇನ್ನೂ ಹಲವಾರು ಸೇವೆಗಳನ್ನು ಒದಗಿಸುವ ಕೇಂದ್ರ ಸರ್ಕಾರದ ಸಂಸ್ಥೆಯಾಗಿದೆ ಹಾಗೂ ಜನರ ಆರ್ಥಿಕ ಭದ್ರತೆ, ಸಂವಹನ ಮತ್ತು ಸೇವೆಗಳ ಕೇಂದ್ರವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಮಹತ್ವವಾದ ಕೊಡುಗೆಗಳನ್ನು ನೀಡುತ್ತಿವೆ. ಹಾಗಾಗಿ ಅಂಚೆ ಕಚೇರಿಯಲ್ಲಿರುವ ಸೇವಾ ಸೌಲಭ್ಯಗಳನ್ನು ಬಳಸಿಕೊಳ್ಳಿ. ಭವಿಷ್ಯಕ್ಕಾಗಿ ಉಳಿತಾಯ ಮಾಡುವುದರಿಂದ ನಮ್ಮ ಜೀವನ ಸುಖಮಯವಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಅಂಚೆ ಕಚೇರಿಯ ಸೌಲಭ್ಯಗಳು ನಮ್ಮ ಬದುಕಿಗೆ ಸಹಕಾರಿ. ಹಾಗಾಗಿ ಈ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಳ್ಳಿ ಮತ್ತು ಇತರರಿಗೆ ಈ ಮಾಹಿತಿಯನ್ನು ಹಂಚಿರಿ ಎಂದು ಹೇಳಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿಯರಾದ ಶ್ರವಣ ಮಹಾಪುರುಷ ಮತ್ತು ರಂಝೀನಾ ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿಗಳಾದ ವಿನಿಶಾ ಮತ್ತು ಬಳಗ ಪ್ರಾರ್ಥಿಸಿ, ರಮೇಶ ಸ್ವಾಗತಿಸಿ, ಶೀತಲ್ ಅತಿಥಿ ಪರಿಚಯಿಸಿ, ಚೈತ್ರಾ ಪಿ ವಂದಿಸಿ, ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ವಾಲಿಬಾಲ್ ಪಂದ್ಯಾಟ: ಬಂಗಾಡಿ ಸ.ಉ.ಪ್ರಾ. ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya
error: Content is protected !!