September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು.

ಮುಖ್ಯ ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ಅಧ್ಯಕ್ಷರು ಹಾಗೂ ಸುದ್ದಿ ಉದಯ ವಾರಪತ್ರಿಕೆಯ ನಿರ್ದೇಶಕ ತುಕಾರಾಂ ಬಿ. ಅವರು ಭಾಗವಹಿಸಿ ವಿದ್ಯಾರ್ಥಿ ಮಂತ್ರಿಮಂಡಲದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಮತ್ತು ಶಿಸ್ತುಬದ್ಧ ಕಾರ್ಯನಿರ್ವಹಣೆಯ ಮಹತ್ವವನ್ನು ವಿವರಿಸಿ ನೂತನ ಮಂತ್ರಿಮಂಡಲಕ್ಕೆ ಶುಭ ಹಾರೈಸಿದರು.

ಈ ಸಾಲಿನ ವಿದ್ಯಾರ್ಥಿ ಸಂಸತ್ತಿಗೆ ಸಂಜನಾ ಎಸ್. ಶಾಲಾ ನಾಯಕಿಯಾಗಿ ಹಾಗೂ ಶ್ರುತ ಶೆಟ್ಟಿ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಜಸ್ವಿತಾ ಕ್ರೀಡಾ ಮಂತ್ರಿಯಾಗಿ, ದಿಶಾ ಡಿ.ಎ. ಶಿಕ್ಷಣ ಮಂತ್ರಿಯಾಗಿ, ಸಾತ್ವಿಕ್ ಆರೋಗ್ಯ ಮಂತ್ರಿಯಾಗಿ, ವಿನ್ಯಾಸ್ ಶಿಸ್ತು ಮಂತ್ರಿಯಾಗಿ ಹಾಗೂ ದಿಶಾ ಕಲೆ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಮತದಾರರ ಸಾಕ್ಷರತಾ ಸಂಘದ ಸಂಯೋಜಕ ಶಿಕ್ಷಕಿಯಾದ ಶ್ರೀಮತಿ ಕಸ್ತೂರಿ ಅವರ ನೇತೃತ್ವದಲ್ಲಿ ನಡೆದ ಈ ಮಂತ್ರಿಮಂಡಲ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಕಿ ನೀತಾ ಕೆ ಎಸ್, ಶಿಕ್ಷಕ ಮುರಳಿ ಪಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಮೇಶುಕ ನಿರೂಪಣೆ ನಡೆಸಿದರು. ಸ್ತವ್ಯ ಶೆಟ್ಟಿ ಸ್ವಾಗತ ಭಾಷಣ ಮಾಡಿದ್ದು, ಆರಾಧ್ಯ ಶೆಣೈ ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ಸಿಲ್, ಪೆನ್ನು ಹಾಗೂ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

Suddi Udaya
error: Content is protected !!