September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಶಾಲಾಭಿವೃದ್ಧಿಯ ನೂತನ ಸಮಿತಿ ಅಧ್ಯಕ್ಷರಾಗಿ ಮಧುಚಂದ್ರ ಗೌಡ , ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಮತ್ತು ಶ್ರೀಮತಿ ಪುಷ್ಪಾ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇನ್ನುಳಿದಂತೆ ಸವಿತಾ, ಸತ್ಯಶಂಕರ್ ಭಟ್, ಯೋಗೀಶ್, ರಾಜು, ತಾರ, ಪ್ರಕಾಶ್, ರಂಜಿತ್, ಶ್ಯಾಮ್ ನಾಯಕ್, ಗೀತಾ, ಪ್ರೇಮ, ಹರಿಣಾಕ್ಷಿ ಝರೀನಾ, ಪೌಝಿಯಾ, ಲೀಲಾವತಿ, ರುಕಿಯಾ ಅವರುಗಳನ್ನು ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ನಿಕಟಪೂರ್ವ ಮುಖ್ಯ ಗುರುಗಳಾದ ಮಂಜುನಾಥ ಜಿ ಮತ್ತು ಶಾಲಾ ಹಿರಿಯ ವಿದ್ಯಾರ್ಥಿ ರಾಜೇಶ್ ಕೆ, ಆಡಳಿತ ಮಂಡಳಿಯ ಅಧ್ಯಕ್ಷ ದಯಾನಂದ ರೈ ಕಡೆಮಜಲು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೂಸಪ್ಪ ಗೌಡ ಸ್ವಾಗತಿಸಿದರು. ಶಿಕ್ಷಕಿ ಮಮತಾ ನಿರೂಪಿಸಿದರು. ಕಾರ್ಯಕ್ರಮಕ್ಕೆ ಆಡಳಿತ ಮಂಡಳಿಯ ಸದಸ್ಯ ಶಿವಪ್ರಸಾದ್ ವಂದಿಸಿದರು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya
error: Content is protected !!