27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಿನಾಚರಣೆ ಹಾಗೂ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧನೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್
ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿ ನ ಪದವಿಪೂರ್ವ ವಿಭಾಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ಮತ್ತು ವ್ಯಸನ ನಿವಾರಣೆ ಮತ್ತು ನಿಯಂತ್ರಣ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲಗಳ ವ್ಯಕ್ತಿಯಾಗಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ವಿಂದ್ಯಾಶ್ರೀ.ಎ ಮಾತನಾಡಿ ಭವಿಷ್ಯದ ಆಶಾಕಿರಣ ಯುವಜನತೆಯನ್ನು ಆವರಿಸಿಕೊಂಡಿರುವ ಮಾದಕ ದ್ರವ್ಯ ಗಳು ಒಂದು ಗಂಭೀರ ಹಾಗೂ ಜಾಗತಿಕ ಸಮಸ್ಯೆ ಯಾಗಿ ಹೊಸ ಪಿಡುಗುಗಳಾಗಿ ಸಮಾಜದ ಸ್ವಾಸ್ಥ್ಯವನ್ನು ಕೆಡುಸುತ್ತಿರುವುದು ನಿಜಕ್ಕೂ ಆತಂಕಕಾರಿ ಹಾಗೂ ನಾವೆಲ್ಲರೂ ಒಟ್ಟಾಗಿ ಸಮಾಜವನ್ನು ಸಬಲೀಕರಣಗೊಳಿಸೋಣ, ಮಾದಕ ದ್ರವ್ಯಗಳನ್ನು ತ್ಯಜಸೋಣ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸೋಣ ಎಂದು ಕರೆ ನೀಡಿದರು.


ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ವಿದ್ಯಾಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆಯಾದ ದೀಕ್ಷಿತಾ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ಸೌಮ್ಯ ಎನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ ಮಹಿಳಾ ಐ.ಟಿ.ಐ ಯಲ್ಲಿ ಬೆಳ್ತಂಗಡಿಯ ಆರೋಗ್ಯ ಇಲಾಖೆಯಿಂದ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!