27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

​ ಬೆಳ್ತಂಗಡಿ: ಬಜಿಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಶಾಲಾ ಪೋಷಕರಿಂದ ಶ್ರಮದಾನ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

ಪೋಷಕರು ಶಾಲಾ ಆವರಣದಲ್ಲಿದ್ದ ಕಳೆಗಿಡಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದರು. ನಂತರ ಶಾಲಾ ಕೈತೋಟವನ್ನು (Kitchen Garden) ವ್ಯವಸ್ಥಿತವಾಗಿ ರಚಿಸಿ, ಅದರಲ್ಲಿ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಉಪಯುಕ್ತವಾಗುವಂತಹ ಬಸಳೆ, ಬೆಂಡೆಕಾಯಿ, ಅಲಸಂಡೆ ಸೇರಿದಂತೆ ವಿವಿಧ ಬಗೆಯ ಪೌಷ್ಟಿಕಾಂಶಯುಕ್ತ ತರಕಾರಿ ಬೀಜಗಳನ್ನು ಬಿತ್ತಿ ಮಾದರಿ ಕೈತೋಟ ಮಾಡಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಅವರ ನೇತೃತ್ವದಲ್ಲಿ ಈ ಶ್ರಮದಾನ ಕಾರ್ಯಕ್ರಮ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಶ್ರಮದಾನದಲ್ಲಿ ಪಾಲ್ಗೊಂಡರು.

Related posts

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya
error: Content is protected !!