23.8 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ವಾ ಟ್ರಸ್ಟ್ ಟ್ರಸ್ಟ್ (ರಿ.), ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ.) ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ & ಮಹಿಳಾ ಯುವ ವೇದಿಕೆ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇದರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು, ಲಾಯಿಲ ಬೆಳ್ತಂಗಡಿ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದ ಮತ್ತು ಬೃಹತ್ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಜೂ.27 ರಂದು ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಲಾಯಿಲ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ. ಗಂಗಾಧರ ಗೌಡ ನೆರವೇರಿಸಿ ಶುಭಕೋರಿದರು.ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಅಧ್ಯಕ್ಷ ರಂಜನ್ ಜಿ. ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಶ್ರೀ ವಿಜಯ ಗೌಡ ವೇಣೂರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗ ಗೌಡರ ಸಂಘ ಜೊತೆ ಕೋಶಾಧಿಕಾರಿ ಸೂರಜ್ ವಳಂಬ್ರ,ಸಂಗಮ ಸಭಾ ಭವನ ಮಾಲಕ ಕಾರ್ತಿಕ್ ಧರ್ಮಣ ಗೌಡ, ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಒಕ್ಕಲಿಗ ಗೌಡರ ಮಹಿಳಾ ಯುವ ವೇ. ಅಧ್ಯಕ್ಷೆ ಅನುಪಮ ಸತೀಶ್ ಗೌಡ, ಜಿಲ್ಲಾ ಒಕ್ಕಲಿಗ ಗೌಡರ ಸಂಘ ನಿರ್ದೇಶಕಿ ಸೌಮ್ಯಲತಾ ಜಯಂತ ಗೌಡ,ತಾ.ಪಂ ಮಾಜಿ‌ ಸದಸ್ಯೆ ಜಯಶೀಲಾ ಕುಶಾಲಪ್ಪ ಗೌಡ,ಮಂಗಳೂರು ವೆನ್ ಲಾಕ್ ಆಸ್ಪತ್ರೆ E.N.T. ವೈದ್ಯರು ಡಾ| ವಿಶ್ವವಿಜೇತ್, ಕೆ.ಎಂ.ಸಿ. ಹಾಸ್ಪಿಟಲ್ ವೈದ್ಯರು ಸಂಕಲ್ಪ, ಉಜಿರೆ ಎಸ್.ಪಿ. ಗ್ರೂಪ್ ಮಾಲಕ ಶಿವಕಾಂತ ಗೌಡ, ಬೆಳಾಲು ಗ್ರಾ.ಪಂ ಮಾಜಿ ಅಧ್ಯಕ್ಷೆ ವಿದ್ಯಾಶ್ರೀನಿವಾಸ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ ಜಯಂತ ಗೌಡ ಗುರಿಪಳ್ಳ, ನೋಟರಿ ವಕೀಲರು ಶ್ರೀನಿವಾಸ ಗೌಡ ಬೆಳಾಲು, ಉಜಿರೆ ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ವಿನುತ ರಜತ್ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸಂಘ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ ಟ್ರಸ್ಟ್ ಕಾರ್ಯದರ್ಶಿ ಭರತ್ ಗೌಡ ಹಾನಿಬೆಟ್ಟು, ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇ. ಕಾರ್ಯದರ್ಶಿ ಗೀತಾ ಚಿದಾನಂದ ಗೌಡ, ಹಾಗೂ ಒಕ್ಕಲಿಗ ಗೌಡರ ಯುವ ವೇ. ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮಮತಾ ಶಿವರಾಮ್ ಪ್ರಾರ್ಥಿಸಿ, ಜಿಲ್ಲಾ ಒಕ್ಕಲಿಗ ಗೌಡರ ಸಂಘದ ನಿರ್ದೇಶಕ ವಿಜಯ ಗೌಡ ವೇಣೂರು ಸ್ವಾಗತಿಸಿದರು.ನಿತಿನ್ ಗೌಡ ಸುರುಳಿ ನಿರೂಪಿಸಿದರು.

Related posts

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

ಕಲ್ಮಂಜ ದೇವರಗುಡ್ಡೆ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಬದಲಾವಣೆಗೆ ಸದಸ್ಯರ ಆಗ್ರಹ: ವಿಸ್ತರಣಾಧಿಕಾರಿಗೆ ಮನವಿ

Suddi Udaya

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!