24.7 C
ಪುತ್ತೂರು, ಬೆಳ್ತಂಗಡಿ
September 29, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆ

ಬೆಳ್ತಂಗಡಿ: ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಮಂಗಳೂರು ಇದರ ನೇತೃತ್ವದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳು, ಹಳೆಕೋಟೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆಯು ಜೂ.27ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಮಂಗಳೂರು ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ವಹಿಸಿದರು.
ಕೊಯ್ಯೂರು ಸರಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲರು ಮೋಹನ ಗೌಡ ಕೆಂಪೇಗೌಡರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಈ ವೇಳೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡರಿಗೆ “ಕೆಂಪೇಗೌಡ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ನಂತರ ಕೆಂಪೇಗೌಡರ ಭಾಷಣ ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗದಲ್ಲಿ ಸೃಷ್ಟಿ ಪ್ರಥಮ ಸ್ಥಾನ, ನಿಶಾ, ಬಿಂದುಶ್ರೀ ದ್ವಿತೀಯ ಸ್ಥಾನ, ಮಾನ್ವಿ ತೃತೀಯ ಸ್ಥಾನ ಹಾಗೂ ಪದವಿ ಪೂರ್ವ ವಿಭಾಗದಲ್ಲಿ ಅಮೋಘ ಪ್ರಥಮ ಸ್ಥಾನ, ಜೋವಿಟಾ, ಕಿರ್ತನಾ ದ್ವಿತೀಯ ಸ್ಥಾನ, ಶರಣ್ಯ ತೃತೀಯ ಸ್ಥಾನ ಪಡೆದ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಜಿಲ್ಲಾ ಮಾತೃ ಸಂಘದ ಕಾರ್ಯದರ್ಶಿ ರಾಮಣ್ಣ ಗೌಡ , ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಉಪಾಧ್ಯಕ್ಷ ಲಿಂಗಪ್ಪ ಗೌಡ, ಜನಾರ್ಧನ ಗೌಡ, ಸುಳ್ಯ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್, ಜಿಲ್ಲಾ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ಮಡಪ್ಪಾಡಿ, ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಕಾರ್ಯದರ್ಶಿ ಗಣೇಶ್ ಗೌಡ, ವಾಣಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ವಿಷ್ಣು ಪ್ರಕಾಶ್, ಮುಖ್ಯಗುರುಗಳಾದ ಲಕ್ಷ್ಮೀನಾರಾಯಣ ಕೆ. ಹಾಗೂ ಸುಹಾಸಿನಿ, ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ರಾಮಣ್ಣ ಗೌಡ, ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಡಿ.ಎಂ. ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಉಪಾಧ್ಯಕ್ಷ ಧರಣಪ್ಪ ಗೌಡ ಬಾನಡ್ಕ, ವಾಣಿ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್, ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ, ನಿರ್ದೇಶಕರಾದ ವಿಜಯ ಗೌಡ, ಉಷಾ ದೇವಿ, ಭವಾನಿ ಗೌಡ, ದಿನೇಶ್ ಕೊಯ್ಯೂರು, ಮಾಧವ ಗೌಡ, ಬಾಲಕೃಷ್ಣ ಗೌಡ ಬಿರ್ಮೋಟ್ಟು, ತಾಲೂಕು ಗೌಡ ಸಂಘದ ಮಾಜಿ ನಿರ್ದೇಶಕ ವಿಜಯ್ ಕುಮಾರ್ ಕೊಯ್ಯೂರು, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಸುರೇಶ್ ಗೌಡ ಕೌಡಂಗೆ, ಗೋಪಾಲ ಕೃಷ್ಣ ಗುಲ್ಲೋಡಿ, ಯುವ ವೇದಿಕೆಯ ಉಪಾಧ್ಯಕ್ಷ ನಿತಿನ್ ಕಲ್ಮಂಜ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ನಾಗಾಜೆ, ಉದ್ಯಮಿ ಗಣೇಶ್ ಗೌಡ ಕಲಾಯಿ,ಮಹಿಳಾ ವೇದಿಕೆಯ ಸದಸ್ಯರು, ಜಿಲ್ಲಾ ಮಾತೃ ಸಂಘದ ಸದಸ್ಯರು, ವಿವಿಧ ಗ್ರಾಮ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು, ಸಮಾಜದ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಯುವ ವೇದಿಕೆಯ ಸದಸ್ಯರು, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


ವಾಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ. ಅತಿಥಿಗಳನ್ನು ಸ್ವಾಗತಿಸಿದರು. ಬೆಳಿಯಪ್ಪ ಕೆ. ಹಾಗೂ ವಿಜೇತ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಧನ್ಯವಾದ ಸಲ್ಲಿಸಿದರು.

Related posts

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ: ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ಪ್ರತಿಭಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya
error: Content is protected !!