27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದಡಿ ಧರ್ಮಸ್ಥಳ ಪಾಂಗಾಳ ನಿವಾಸಿ ವಿಠಲ ಗೌಡ ವಿರುದ್ಧ ಬಂಧನ ಆದೇಶ ಜಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ನ್ಯಾಯಾಲಯವು ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯ ಆದೇಶಕ್ಕೆ ವಿಠಲ ಗೌಡ ಅಗೌರವ ತೋರಿಸಿದ್ದರು. ತಡೆಯಾಜ್ಞೆಯನ್ನು ಅವರು ಉಲ್ಲಂಘಿಸಿದ ಕಾರಣ, ನ್ಯಾಯಾಂಗ ನಿಂದನೆ ಪ್ರಕರಣದಡಿ ನ್ಯಾಯಾಲಯವು ಇದೀಗ ಬಂಧನಕ್ಕೆ ಆದೇಶಿಸಿದೆ. ಜೂನ್ 8ರಂದು ಬಂಧನ ಆದೇಶ ಜಾರಿಯಾಗಿದ್ದು, ಜೂನ್ 30ರೊಳಗೆ ಬಂಧಿಸಬೇಕು ಎಂದು ಕೋರ್ಟ್ ಸೂಚಿಸಿತ್ತು.

ಅಧಿಕಾರಿಗಳು ಬೆಳ್ತಂಗಡಿಯ ವಿಠಲ್ ಗೌಡ ನಿವಾಸಕ್ಕೆ ತೆರಳಿದ್ದು, ಈ ವೇಳೆ ಅವರು ಪತ್ತೆಯಾಗಿಲ್ಲ. ವಿಠಲ್ ಗೌಡ ಇತ್ತೀಚೆಗೆ ಮನೆಗೆ ಬಂದಿಲ್ಲ ಎಂದು ಹೇಳಿದ್ದಾರೆಂದು ವರದಿಯಾಗಿದೆ.
ವಿಠಲ್ ಗೌಡ ಕಳೆದ ನಾಲ್ಕು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ವಿಠಲ ಗೌಡರನ್ನು ಬಂಧಿಸಲು ಇಂದು (ಜೂ.27) ಬೆಂಗಳೂರಿನಿಂದ ಕೋರ್ಟ್ ಅಧಿಕಾರಿಗಳು ಬಂದಿದ್ದು, ಸ್ಥಳೀಯ ಪೊಲೀಸರ ಸಹಕಾರದಿಂದ ಹುಡುಕಾಟ ನಡೆಸುತ್ತಿದ್ದಾರೆ. ಕೋರ್ಟ್ ಅಧಿಕಾರಿಗಳು ಆತನ ಮನೆ, ಕುಸುಮಾವತಿಯವರ ಮನೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

Related posts

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya
error: Content is protected !!