25 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ,ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ಸಹಯೋಗದೊಂದಿಗೆ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾಯ೯ಕ್ರಮ ಜೂ.27ರಂದು ಸಿ.ವಿ.ಸಿ. ಬೆಳ್ತಂಗಡಿಯಲ್ಲಿ ಜರುಗಿತು.

ಕಾಯ೯ಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಶ್ರೀನಾಥ್, ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಸಂಘ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಯಂಜ, ಭಾಗವಹಿಸಿದ್ದರು.


ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯ ಕನ್ನಡ ಸಹಪ್ರಾಧ್ಯಾಪಕರು ದಿವಾಕರ ಕೆ. ಪ್ರಧಾನ ಭಾಷಣ ಮಾಡಿ, ಕೆಂಪೇಗೌಡ ಅವರ ಜೀವನ ಹಾಗೂ ಸಾಧನೆಯನ್ನು ತಿಳಿಸಿದರು.

ಮುಖ್ಯಾಧಿಕಾರಿ ರಾಜೇಶ್ ಕೆ. , ಉಪತಹಶೀಲ್ದಾರ್ ಜಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾ . ಪಂ ಕಾಯ೯ನಿವಾಹ೯ಣಾಧಿಕಾರಿ ಭವಾನಿಶಂಕರ್ ಸ್ವಾಗತಿಸಿದರು. ತಾ.ಪಂ ಸಂಯೋಜಕ ಜಯಾನಂದ್ ಲಾಯಿಲ ಹಾಗೂ ಬಿ.ಸಿ.ಎಂ.ಮೇಲ್ವಿಚಾರಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ಆ.12: ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು” ; ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya
error: Content is protected !!