27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಜೂ. 27 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ,
ಸಾಂತೋಮ್ ಟವರ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಮೆಲ್ಬಿ ಪಿ ಸಿ ಮಾಲೀಕರು, ಸ್ಪಂದನ ಚಿಕಿತ್ಸಾ ಕೇಂದ್ರ ಬೆಳ್ತಂಗಡಿ ಹಾಗೂ ಶ್ರೀಮತಿ ಮಂಜು ಜೋಸೆಫ್ ಪ್ರಯೋಗ ಶಾಲಾ ತಂತ್ರಜ್ಞರು, ಸ್ಪಂದನ ಚಿಕಿಸ್ತಾ ಕೇಂದ್ರ ಬೆಳ್ತಂಗಡಿ ಆಗಮಿಸಿ, ಪೌಷ್ಟಿಕ ಆಹಾರದ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಶ್ರೀಮತಿ ತೃಪ್ತಿ ಸಮುದಾಯ ಸಂಪರ್ಕ ಆರೋಗ್ಯ ಕೇಂದ್ರ ಹೊಂಗಿರಣ ನೆಟ್ವರ್ಕ್ ಕೇಂದ್ರ ಮಂಗಳೂರು ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪುಷ್ಪರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ
ಫಾ. ಆದರ್ಶ್ ಪಿ ಎಸ್ ಇವರು ಪ್ರಾಸ್ತವಿಕ ನುಡಿಯನ್ನು ಆಡಿದರು.


ನವಜೀವನ ಆರೈಕೆ ಹಾಗೂ ಬೆಂಬಲ ಕೇಂದ್ರದ ಸದಸ್ಯರು ಹಾಡನ್ನಾಡಿದರು.
ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಶ್ರೀಮತಿ ಪುಷ್ಪ ರವರು ಪ್ರಾರ್ಥನೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ವಿದ್ಯಾ ನಿಧಿ ಸಂಯೋಜಕಿ ಶ್ರೀಮತಿ ಜಿನಿ ಪಿ ಜೆ ಸ್ವಾಗತಿಸಿದರು. ನವ ಜೀವನ ಆರೈಕೆ ಬೆಂಬಲ ಸದಸ್ಯೆ ಶಾರದ ವಂದಿಸಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ. ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!