24.7 C
ಪುತ್ತೂರು, ಬೆಳ್ತಂಗಡಿ
September 29, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಏರ್ಮಳ್ ಅವರು ಜೂ.27ರಂದು ಭೇಟಿ ನೀಡಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅವರು ಎನ್‌ಎಸ್‌ಎಸ್ ಘಟಕದ ಕಾರ್ಯವೈಖರಿ, ದಾಖಲಾತಿಗಳು ಹಾಗೂ ವಿವಿಧ ಸೇವಾ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಸಮಾಜಮುಖಿ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಎನ್‌ಎಸ್‌ಎಸ್‌ನ ಪಾತ್ರ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರು ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಭೇಟಿ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya

ಬುರುಡೆ ಚಿನ್ನಯ್ಯನ ಎರಡನೇ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

Suddi Udaya
error: Content is protected !!