27.1 C
ಪುತ್ತೂರು, ಬೆಳ್ತಂಗಡಿ
September 27, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡದಲ್ಲಿ ವಾಹನ ದಟ್ಟನೆಗೆ ಸವಾರರು ಹೈರಾಣು

ಬೆಳ್ತಂಗಡಿ: ಉಜಿರೆ ಪೆರಿಯಶಾಂತಿ ಸ್ಪರ್ ರಸ್ತೆಯ ಕಾಪಿನಬಾಗಿಲಿನಿಂದ ಕೊಕ್ಕಡ ಜಂಕ್ಷನ್ ತನಕ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಬಸವಳಿದ ಬಗ್ಗೆ ಜೂ. 28 ರಂದು ವರದಿಯಾಗಿದೆ.

ವಾರಂತ್ಯದ ಹಾಗೂ ಸರಣಿ ರಜೆಯಿಂದ ಧರ್ಮಸ್ಥಳ, ಸೌತಡ್ಕ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವ ಯಾತ್ರರ್ಥಿಗಳ ಸಂಖ್ಯೆ ಹೆಚ್ಚಿದ ಕಾರಣ ಕೊಕ್ಕಡ ಪೇಟೆಯಿಂದ ಕಾಪಿನಬಾಗಿಲಿನವರೆಗೆ ರಸ್ತೆಯ ಎರಡು ಬದಿ ವಾಹನ ದಟ್ಟನೆಯಿಂದ ಗಂಟೆಗಟ್ಟಲೆ ಪ್ರಯಾಣಿಕರು ಜಡಿ ಮಳೆಯೊಂದಿಗೆ ರಸ್ತೆ ನಡುವೆ ಸಿಲುಕಿಕೊಂಡಿದ್ದರು. ಬೆಂಗಳೂರು, ಹಾಸನ ಭಾಗದ ಬಸ್ ಗಳು, ಟೂರಿಸ್ಟ್ ವಾಹನ, ಆ ಭಾಗದ ಗ್ರಾಮೀಣ ಪ್ರದೇಶದ ಜನರು ತೀವ್ರ ಸಂಕಷ್ಟ ಅನುಭವಿಸಿದರು.

ಸೌತಡ್ಕ ಮಹಾಗಣಪತಿ ಕ್ಷೇತ್ರಕದ ದ್ವಾರದ ಬಳಿ ಟ್ರಾಫಿಕ್ ಕಿರಿಕಿರಿ ಉಂಟಾಗಿ ಆ ಕಡೆಯಿಂದ ಬರುವ ಹಾಗೂ ಹೋಗುವ ವಾಹನಳು ಆಚೆ ಇಚೆ ಹೋಗಲಾರದೆ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಾಕಿಗೊಂಡಿತ್ತು. ಟ್ರಾಫಿಕ್ ಕಿರಿಕಿರಿಯನ್ನು ತಪ್ಪಿಸಲು ಪೊಲೀಸರು ಇಲ್ಲದೇ ಬಸ್ ನಿರ್ವಹಾಕರು ಸಾರ್ವಜನಿಕರು ಕ್ಲಿಯರ್ ಮಾಡಬೇಕಾದ ಪರಿಸ್ಥಿತಿ ಇದೆ ಹಾಗಾಗಿ ಪೊಲೀಸ್ ಇಲಾಖೆ ಇಲ್ಲಿಗೆ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹೆಚ್ಚಿನ ವಾರಂತ್ಯದಲ್ಲಿ ಕೊಕ್ಕಡ ಪೇಟೆ ಟ್ರಾಫಿಕ್ ಜಾಮ್ ಗೆ ಒಳಗಾಗುತ್ತಿದೆ. ಇಂದು ಹಾಲು ತರಲು ಪೇಟೆಗೆ ಹೋದಲ್ಲಿ ವಾಹನ ದಟ್ಟನೆಯಿಂದ ಒಂದು ಗಂಟೆ ಬಳಿಕ ಮನೆ ಸೇರುವ ಪರಿಸ್ಥಿತಿ, ಪ್ರತಿ ಭಾರಿ ಸಮಸ್ಯೆ ಎದುರಿಸುತ್ತಿದ್ದೇವೆ ಎನ್ನುತ್ತಾರೆ ಸಾರ್ವಜನಿಕರು.

Related posts

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!